ನವದೆಹಲಿ:ಕೊರೊನಾ ವೈರಸ್ ವಿರುದ್ಧದ ದೇಶದ ಹೋರಾಟದಲ್ಲಿ ಪ್ರತಿಯೊಬ್ಬ ನಾಗರಿಕನೂ ಸೈನಿಕನೇ ಆಗಿದ್ದಾನೆ. ಇದುವರೆಗೆ ದೇಶದ ಎಲ್ಲರೂ ಸಹಕರಿಸಿದ್ದಾರೆ. ಇದಕ್ಕಾಗಿ ದೇಶದ 130 ಕೋಟಿ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದೆಯೂ ತಮ್ಮ ಜಿಲ್ಲೆ, ತಾಲೂಕು, ಗ್ರಾಮಗಳಲ್ಲಿ ಕೊರೊನಾ ವೈರಸ್ ವಿರುದ್ಧದ ಹೋರಾಟ ಮುಂದುವರಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 64ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೊನಾ ವಿರುದ್ಧ ದೇಶದ ಹೋರಾಟವು ಭಾರತದಲ್ಲಿ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಬಡತನದ ವಿರುದ್ಧ ಹೋರಾಡುತ್ತಲೇ ನಾವು ಮಾರಕ ರೋಗದ ವಿರುದ್ಧವೂ ಹೋರಾಟ ನಡೆಸುತ್ತಿದ್ದೇವೆ ಎಂದ ಅವರು ದೇಶದಲ್ಲಿನ ಯಾವ ಜನರು ಸಹ ಹಸಿವಿನಿಂದ ಬಳಲಬಾರದು ಎಂದು ರೈತರು ಹೊಲಗಳಲ್ಲಿ ಹಗಲು-ರಾತ್ರಿ ಕಷ್ಟಪಡುತ್ತಿದ್ದಾರೆ, ರೈಲ್ವೆ, ವಿಮಾನ ಸಂಸ್ಥೆಗಳು ಔಷಧಗಳನ್ನು ದೇಶದ ಮೂಲೆ ಮೂಲೆಗೆ ತಲುಪಿಸುವ ಕೆಲಸ ಮಾಡುತ್ತಿವೆ ಇದು ನಮ್ಮೆಲ್ಲರಿಗಾಗಿ ಎಂದರು.
ಇಂದು ವಿವಿಧ ದೇಶಗಳ ರಾಜಕೀಯ ನಾಯಕರೊಡನೆ ಮಾತುಕತೆ ನಡೆಸುವಾಗ ಭಾರತಕ್ಕೆ ವಂದನೆ ಸಲ್ಲಿಸುತ್ತಾರೆ. ಭಾರತೀಯರಿಗೆ ಅಭಿನಂದನೆ ಸಲ್ಲಿಸುತ್ತಾರೆ ಆಗ ನಮಗೆ ಹೆಮ್ಮೆ ಆಗುತ್ತದೆ ಎಂದು ಮೋದಿ ಹೇಳಿದರು. ಇದು ದೇಶದ ಎಲ್ಲಾ ಜನರ ಪ್ರಯತ್ನದಿಂದ ಸಾಧ್ಯವಾಗಿದೆ ಎಂದರು.
ಲಾಕ್ಡೌನ್ ಸಮಯದಲ್ಲಿ ಚಪ್ಪಾಳೆ ತಟ್ಟವಂತೆ ಹಾಗೂ ದೀಪ ಬೆಳಗುವಂತೆ ಹೇಳಲಾಗಿತ್ತು, ಜನರು ಇದನ್ನು ಪಾಲಿಸಿದ್ದರು. ಈ ರೀತಿಯ ಆಂದೋಲನಗಳು ಪ್ರತಿಯೊಬ್ಬರಲ್ಲೂ ಸ್ಫೂರ್ತಿ ತುಂಬಿವೆ ಎಂದರು. ಕೊರೊನಾ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ರನ್ನುಕೇಂದ್ರ ಸರಕಾರದ ಪೋರ್ಟಲ್ ಮೂಲಕ ಸಂಪರ್ಕಿಸುವಂತೆ ಸೂಚಿಸಿದರು. ಇತ್ತೀಚೆಗೆ ಆರಂಭಗೊಂಡ ಈ ಪೋರ್ಟಲ್ ನಲ್ಲಿ ಈಗಾಗಲೇ 1.25 ಕೋಟಿ ಜನರು ಸಂಪರ್ಕ ಹೊಂದಿದ್ದಾರೆ ಎಂದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.