ಸರ್ಕಾರದಿಂದ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆ | ಈ ಮೂಲಕ ರೈತರ ಆದಾಯ ವೃದ್ಧಿಗೆ ಕಟಿಬದ್ಧ| ಕೃಷಿ ಸಚಿವ ಬಿ ಸಿ ಪಾಟೀಲ್

February 24, 2023
1:17 PM

ಬಿಜೆಪಿ ಸರ್ಕಾರ ಕೃಷಿಯಲ್ಲಿ ಹಲವು ಮಹತ್ತರ ಬದಲಾವಣೆಗಳನ್ನು ತರುವ ಮೂಲಕ ರೈತರ ಆದಾಯ ವೃದ್ಧಿಗೆ ಕಠಿಬದ್ಧವಾಗಿ ನಡೆಯುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಪುನರುಚ್ಚರಿಸಿದರು. ಅವರಿಂದು ಕೃಷಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ” ಸಂಗಮ ಸಭಾಂಗಣ”ವನ್ನು ಉದ್ಘಾಟಿಸಿ ಮಾತನಾಡಿದರು‌.

Advertisement

ಈ ಬಾರಿ ಬಜೆಟ್‌ನಲ್ಲಿ ರೈತರಿಗೆ ಶೂನ್ಯಬಡ್ಡಿ ದರದಲ್ಲಿ ಸಾಲ ಅಲ್ಲದೇ ಸಾಲದ ಮೊತ್ತವನ್ನು ೫ಲಕ್ಷ ರೂ.ಗೆ ಸರ್ಕಾರ ಏರಿಸಿದೆ‌ಅಲ್ಲದೇ ಕೃಷಿಕರಿಗಾಗಿ ಹಲವು ಅಭಿವೃದ್ಧಿಪರ ಯೋಜನೆಗಳನ್ನು ರೂಪಿಸಿದೆ‌.ಜನಸ್ನೇಹಿ ಬಜೆಟ್ ರೂಪಿಸಿರುವ ಬಿಜೆಪಿ ಸರ್ಕಾರ ಕಿರುಧಾನ್ಯಗಳ ವಿಸ್ತೀರ್ಣ ಉತ್ಪಾದನೆ ಹೆಚ್ಚಿಸಲು ರೈತಸಿರಿ ಯೋಜನೆಯಡಿ ಕಿರುಧಾನ್ಯ ಬೆಳೆಗಾರರಿಗೆ 10 ಸಾವಿರ.ರೂ.ಗಳಪ್ರೋತ್ಸಾಹ ಧನವನ್ನು ನೀಡುತ್ತಿದೆ.ಸಿರಿಧಾನ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಉತ್ತೇಜನ ನೀಡುತ್ತಿವೆ.ಕೃಷಿ ಮತ್ತು ಪೂರಕ ಚಟುವಟಿಕೆಗಳ ವಲಯಕ್ಕೆ 2023-24 ನೇ‌ಸಾಲಿನಲ್ಲಿ ಒಟ್ಟಾರೆಯಾಗಿ ,39,031 ಕೋಟಿ ರೂ ಅನುದಾನ ಒದಗಿಸಲಾಗಿದೆ  ಎಂದರು.

ಇದೇ ತಿಂಗಳ‌ ಅಂದರೆ ಫೆ.27 ರಂದು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತನ್ನು ನರೇಂದ್ರ ಮೋದಿ ಅವರು ಶಿವಮೊಗ್ಗದಿಂದಲೇ ರೈತರ ಖಾತೆಗಳಿಗೆ ಜಮಾ ಮಾಡಲಿದ್ದಾರೆ ಎಂದು‌ ಸಂಸದ‌ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿರುವುದಾಗಿ ಇದೇ ವೇಳೆ ಬಿಸಿಪಿ ತಿಳಿಸಿದರು. ಕೃಷಿ ಇಲಾಖೆ ರೈತಸ್ನೇಹಿಯಾಗಿದ್ದು, ರೈತರು ಸಂಬಂಧಪಟ್ಟ ತಮ್ಮ ವ್ಯಾಪ್ತಿಯಲ್ಲಿನ ಕಚೇರಿಗಳಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಸಮಸ್ಯೆಗಳಿಗೆ ಪರಿಹಾರ ಪಡೆಯುತ್ತಿರಬೇಕು‌.ಅಲ್ಲದೇ ಕೃಷಿ ವಿಶ್ವವಿದ್ಯಾಲಯಗಳಿಗೂ ಭೇಟಿ ನೀಡಿ ಅಲ್ಲಿನ‌ಹೊಸತಳಿಗಳ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಸಚಿವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆಯ ಆಯುಕ್ತ ಶರತ್ ಪಿ, ನಿರ್ದೇಶಕ ಪುತ್ರನ್, ಅಧಿಕಾರಿಗಳಾದ ವೆಂಕಟರಮಣರೆಡ್ಡಿ ಸೇರಿದಂತೆ ಮತ್ತಿತ್ತರು ಉದ್ಘಾಟನಾ ಕಾರ್ಯಕ್ರಮ ವೇಳೆ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”
April 17, 2025
10:44 AM
by: ದ ರೂರಲ್ ಮಿರರ್.ಕಾಂ
ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ
April 17, 2025
5:27 AM
by: ದ ರೂರಲ್ ಮಿರರ್.ಕಾಂ
ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ
April 16, 2025
9:41 PM
by: ಡಾ.ಚಂದ್ರಶೇಖರ ದಾಮ್ಲೆ
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ
April 16, 2025
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group