ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕರಾವಳಿಯಲ್ಲಿ ಬಿಸಿಗಾಳಿಯ ವಾತಾವರಣವಿದ್ದು, ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ 35.4 ಡಿಗ್ರಿ, ಹೊನ್ನಾವರದಲ್ಲಿ 34 ಡಿಗ್ರಿ ಸೆಲ್ಸಿಯೆಸ್ ಉಷ್ಣಾಂಶ ದಾಖಲಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲೂ ತಾಪಮಾನದಲ್ಲಿ ಭಾರೀ ಏರಿಕೆಯಾಗಿದೆ. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಗಾಳಿ ಇರಲಿದೆ. ಇಂದು ಅತಿಹೆಚ್ಚು ಉಷ್ಣಾಂಶ ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯೆಸ್ ದಾಖಲಾಗಿದೆ. ಅತಿಕಡಿಮೆ 16.6 ಡಿಗ್ರಿ ಸೆಲ್ಸಿಯೆಸ್ ಬೀದರ್‌ನಲ್ಲಿ ದಾಖಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel