ಸಾಗರ ಆರ್ಥಿಕತೆ | ಉದ್ಯೋಗ ಸೃಷ್ಟಿ ಹೆಚ್ಚಳ  | ಚೆನ್ನೈನಲ್ಲಿ ನಡೆದ ಸಾಗರ ವ್ಯಾಪಾರ ಸಮಾವೇಶ |

November 6, 2024
6:54 AM

ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ ಎಂದು ಕೇಂದ್ರ ಹಡಗುಯಾನ  ಮತ್ತು ಬಂದರು ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.

ಚೆನ್ನೈನಲ್ಲಿ, ಸಾಗರ ವ್ಯಾಪಾರ ಸಮಾವೇಶ 2024ರಲ್ಲಿ ಅವರು, ವಿಕಸಿತ ಭಾರತ ಗುರಿ ತಲುಪುವ ಅಮೃತಕಾಲದಲ್ಲಿ ದೇಶದ ಸಾಗರ ವಲಯ ಕೈಗಾರಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದರು.ಜಿ-20 ನಿರ್ಣಯದ ಅನುಸಾರ ಭಾರತ -ಮಧ್ಯಪ್ರಾಚ್ಯ-ಯುರೋಪ್ ಸಾಗರ ಕಾರಿಡಾರ್ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಅತ್ಯಾಧುನಿಕ ಮೂಲಸೌಕರ್ಯದ ಮೂಲಕ ಭಾರತವನ್ನು ಸಾಗರ ವ್ಯಾಪಾರದ ಪ್ರಮುಖ ತಾಣವನ್ನಾಗಿಸುವ ನಿಟ್ಟಿನಲ್ಲಿ ಸಾಗರ ಮಾಲಾ, ಸಾಗರ ಸೇತು, ಸಾಗರ ಸಮೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ 9 ಬಂದರುಗಳನ್ನು ಜಾಗತಿಕ ಶ್ರೇಣಿಗೆ ಅನುಸಾರವಾಗಿ  ಅಭಿವೃದ್ಧಿಪಡಿಸಲಾಗಿದ್ದು, ಹಡಗು ನಿರ್ಮಾಣ ಕೈಗಾರಿಕೆಯಲ್ಲಿ ಭಾರತ ಶೀಘ್ರವೇ ಅಗ್ರ 5 ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಯಾಗುವ ವಿಶ್ವಾಸವಿದೆ. ಪರಿಸರಸ್ನೇಹಿ ಕ್ರಮದ ಅನುಸಾರ ದೇಶದ ಬಂದರುಗಳಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ದೇಶದ ಆರ್ಥಿಕತೆ ಬಲಪಡಿಸುವಲ್ಲಿ ಒಳನಾಡು ಜಲಮಾರ್ಗಗಳು ಮುಖ್ಯ ಪಾತ್ರ ವಹಿಸಲಿದ್ದು, ಇವುಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror