ಸಾಗರ ಆರ್ಥಿಕತೆ ವಲಯದಲ್ಲಿ ಹೆಚ್ಚಿನ ಉದ್ಯೋಗಸೃಷ್ಟಿ ಮತ್ತು ಸುಸ್ಥಿರತೆ ಕಾಯ್ದುಕೊಳ್ಳುವುದು ಸರ್ಕಾರದ ಗುರಿಯಾಗಿದೆ. ಈ ನಿಟ್ಟಿನಲ್ಲಿ ಕಳೆದ ವರ್ಷ 100 ಶತಕೋಟಿ ಡಾಲರ್ ಬಂಡವಾಳ ಹೂಡಿಕೆ ಆಕರ್ಷಿಸಲಾಗಿದೆ ಎಂದು ಕೇಂದ್ರ ಹಡಗುಯಾನ ಮತ್ತು ಬಂದರು ಖಾತೆ ಸಚಿವ ಸರ್ಬಾನಂದ ಸೋನೊವಾಲ್ ಹೇಳಿದ್ದಾರೆ.
ಚೆನ್ನೈನಲ್ಲಿ, ಸಾಗರ ವ್ಯಾಪಾರ ಸಮಾವೇಶ 2024ರಲ್ಲಿ ಅವರು, ವಿಕಸಿತ ಭಾರತ ಗುರಿ ತಲುಪುವ ಅಮೃತಕಾಲದಲ್ಲಿ ದೇಶದ ಸಾಗರ ವಲಯ ಕೈಗಾರಿಕೆ ಮಹತ್ವದ ಪಾತ್ರ ವಹಿಸಲಿದೆ ಎಂದರು.ಜಿ-20 ನಿರ್ಣಯದ ಅನುಸಾರ ಭಾರತ -ಮಧ್ಯಪ್ರಾಚ್ಯ-ಯುರೋಪ್ ಸಾಗರ ಕಾರಿಡಾರ್ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಅತ್ಯಾಧುನಿಕ ಮೂಲಸೌಕರ್ಯದ ಮೂಲಕ ಭಾರತವನ್ನು ಸಾಗರ ವ್ಯಾಪಾರದ ಪ್ರಮುಖ ತಾಣವನ್ನಾಗಿಸುವ ನಿಟ್ಟಿನಲ್ಲಿ ಸಾಗರ ಮಾಲಾ, ಸಾಗರ ಸೇತು, ಸಾಗರ ಸಮೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ದೇಶದ 9 ಬಂದರುಗಳನ್ನು ಜಾಗತಿಕ ಶ್ರೇಣಿಗೆ ಅನುಸಾರವಾಗಿ ಅಭಿವೃದ್ಧಿಪಡಿಸಲಾಗಿದ್ದು, ಹಡಗು ನಿರ್ಮಾಣ ಕೈಗಾರಿಕೆಯಲ್ಲಿ ಭಾರತ ಶೀಘ್ರವೇ ಅಗ್ರ 5 ರಾಷ್ಟ್ರಗಳ ಪಟ್ಟಿಯಲ್ಲಿ ಸೇರ್ಪಡೆಯಾಗುವ ವಿಶ್ವಾಸವಿದೆ. ಪರಿಸರಸ್ನೇಹಿ ಕ್ರಮದ ಅನುಸಾರ ದೇಶದ ಬಂದರುಗಳಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ದೇಶದ ಆರ್ಥಿಕತೆ ಬಲಪಡಿಸುವಲ್ಲಿ ಒಳನಾಡು ಜಲಮಾರ್ಗಗಳು ಮುಖ್ಯ ಪಾತ್ರ ವಹಿಸಲಿದ್ದು, ಇವುಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…