ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

February 14, 2026
7:45 AM
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish Hatchery ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಆಗ್ರಹಿಸಿದರು.

ಮೀನುಗಾರಿಕೆಯೇ ಪ್ರಮುಖ ಉದ್ಯಮವಾಗಿರುವ ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಉತ್ಪಾದನೆ ಕೊರತೆ ನೀಗಿಸಲು ಸಮುದ್ರ ಮೀನು ಮರಿ ಉತ್ಪಾದನಾಕೇಂದ್ರ(Marine Finfish Hatchery)ವನ್ನು ಸ್ಥಾಪಿಸಬೇಕೆಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ.

Advertisement
Advertisement

ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಪ್ರಸ್ತಾಪಿಸಿರುವ ಕ್ಯಾ.ಚೌಟ ಅವರು, ದಕ್ಷಿಣ ಕನ್ನಡವು ಕರ್ನಾಟಕದಲ್ಲೇ ಮೀನುಗಾರಿಕೆಯಲ್ಲಿ ಪ್ರಮುಖ ಹಬ್‌ ಆಗಿದ್ದು, ಈ ಭಾಗದಲ್ಲಿ ಸಾವಿರಾರು ಜನರು ಮೀನುಗಾರಿಕೆಯನ್ನೇ ಜೀವನೋಪಾಯವಾಗಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪಂಜರ ಮೀನುಗಾರಿಕೆಗೆ (Cage  Culture) ಉತ್ತೇಜನ ನೀಡಲು ಈ ಹ್ಯಾಚರಿ ಸ್ಥಾಪನೆ ಅತ್ಯಗತ್ಯವಾಗಿದೆ. ಆದರೆ, ಗುಣಮಟ್ಟದ ಸಮುದ್ರ ಮೀನು ಮರಿಗಳ ಕೊರತೆಯಿಂದ ಪಶ್ಚಿಮ ಕರಾವಳಿಯ ಸಮುದ್ರ ಮೀನು ಕೃಷಿ ಅಭಿವೃದ್ಧಿಗೆ ಅಡ್ಡಿಯಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಮೀನು ಮರಿಗಳನ್ನು ಪೂರ್ವ ಕರಾವಳಿಯಿಂದ ತರಬೇಕಾಗುತ್ತಿದೆ. ಇದರಿಂದ ವೆಚ್ಚ ಹೆಚ್ಚಳ, ಸಾಗಣೆ ಸಮಸ್ಯೆಗಳು ಮತ್ತು ಜೈವಿಕ ಭದ್ರತಾ ಅಪಾಯದಂಥ ಸವಾಲುಗಳು ಕೂಡ ಎದುರಾಗುತ್ತಿವೆ. ಹೀಗಾಗಿ, ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪಿಸುವ ಅಗತ್ಯತೆಯಿದೆ ಎಂದು ಕ್ಯಾ. ಚೌಟ ಅವರು ಸದನದ ಗಮನಸೆಳೆದರು.

ICAR-  ಸೆಂಟ್ರಲ್‌ ಮರೈನ್‌ ಫಿಶರೀಸ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಸಿದ್ಧಪಡಿಸಿರುವ  ವರದಿಯನ್ನುಉಲ್ಲೇಖಿಸಿದ ಸಂಸದರು, ಈ ಮೀನು ಮರಿ ಉತ್ಪಾದನಾ ಕೇಂದ್ರದಲ್ಲಿ ವರ್ಷಕ್ಕೆ ವಿವಿಧ ಪ್ರಬೇಧಗಳ 10ರಿಂದ 20 ಲಕ್ಷ ಮೀನು ಮರಿಗಳನ್ನು ಉತ್ಪಾದಿಸಬಹುದು. ಕೋಬಿಯಾ, ಸಿಲ್ವರ್ ಪೊಂಪಾನೋ, ಇಂಡಿಯನ್ ಪೊಂಪಾನೋ ಹಾಗೂ ಸ್ನ್ಯಾಪರ್ ಸೇರಿದಂತೆ ಮೌಲ್ಯಯುತ ಮೀನು ಪ್ರಬೇಧಗಳನ್ನು ಇಲ್ಲಿ ಉತ್ಪಾದಿಸಬಹುದು. ಈ ಹ್ಯಾಚರಿ ಸ್ಥಾಪನೆಯಿಂದ ಸಮುದ್ರ ಕೇಜ್ ಫಾರ್ಮಿಂಗ್‌ಗೆ ಉತ್ತೇಜನ ದೊರೆಯುವ ಜತೆಗೆ ಉದ್ಯೋಗ ಸೃಷ್ಟಿ, ಸ್ಥಳೀಯ ಉದ್ಯಮಿಗಳಿಗೆ ಅವಕಾಶ ಹಾಗೂ ಮೀನು ಸಂಪತ್ತು ಉತ್ಪಾದನೆ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ. ಹೀಗಾಗಿ, ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಅಗತ್ಯ ತಾಂತ್ರಿಕ ನೆರವು ಹಾಗೂ ಆರ್ಥಿಕ ಸಹಾಯದ ಮೂಲಕ ಈ ಯೋಜನೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕ್ಯಾ. ಚೌಟ ಅವರು ಕೇಂದ್ರ ಮೀನುಗಾರಿಕಾ ಸಚಿವಾಲಯವನ್ನು ಒತ್ತಾಯಿಸಿದ್ದಾರೆ.

MP Brijesh Chowta has urged the Union government in the Lok Sabha under Rule 377 to establish a Marine Finfish Hatchery in Mangaluru to address the shortage of quality fish seed in Dakshina Kannada, a major fisheries hub in Karnataka. He noted that the lack of locally produced marine fish seed is hindering sea cage culture development along the west coast, forcing farmers to procure seed from the east coast, leading to higher costs, logistical challenges, and biosecurity risks. Citing a report by ICAR-Central Marine Fisheries Research Institute (CMFRI), he stated that the proposed hatchery could produce 1–2 million high-value marine fish seed annually, including cobia, silver pompano, Indian pompano, and snapper, thereby boosting cage farming, creating jobs, and supporting coastal livelihoods.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror