ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ತಿಳಿಸಿದ್ದಾರೆ. ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ. ರೈತರ ಹಲವು ದಿನಗಳ ಬೇಡಿಕೆಯಾದ ಕನಿಷ್ಟ ಬೆಂಬಲ ಬೆಲೆ ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರಸರ್ಕಾರವನ್ನು ಮುಖ್ಯಮಂತ್ರಿ ಒತ್ತಾಯಿಸಿದರು. ಇದೇ ವೇಳೆ ಮಾತನಾಡಿದ ಉಪಮುಖ್ಯಂತ್ರಿ ಡಿ ಕೆ ಶಿವಕುಮಾರ್ “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಎಂದಿದ್ದಾರೆ.