ಮುಂದಿನ ವರ್ಷದಿಂದ ಎಪಿಎಂಸಿಗಳಲ್ಲಿ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ

January 24, 2025
6:49 AM
ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,  ಮಂಡ್ಯ  ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ  ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ ರೈತರಿಗೆ  ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ತಿಳಿಸಿದ್ದಾರೆ.  ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ತಿಳಿಸಿದ್ದಾರೆ.   ರೈತರ ಹಲವು ದಿನಗಳ ಬೇಡಿಕೆಯಾದ  ಕನಿಷ್ಟ ಬೆಂಬಲ ಬೆಲೆ ಯೋಜನೆಯನ್ನು ಜಾರಿಗೆ ತರಬೇಕೆಂದು ಕೇಂದ್ರಸರ್ಕಾರವನ್ನು ಮುಖ್ಯಮಂತ್ರಿ ಒತ್ತಾಯಿಸಿದರು.   ಇದೇ ವೇಳೆ ಮಾತನಾಡಿದ ಉಪಮುಖ್ಯಂತ್ರಿ ಡಿ ಕೆ ಶಿವಕುಮಾರ್ “ಸಾವಯವ ಕೃಷಿ ಮತ್ತು ಸಿರಿಧಾನ್ಯ ಕೃಷಿಗೆ ಹೆಚ್ಚಿನ ಮಹತ್ವ ನೀಡಿದರೆ ರೈತರ ಬದುಕು ಹಾಗೂ ಜನರ ಆರೋಗ್ಯವನ್ನು ಕಾಪಾಡಬಹುದು” ಎಂದು ಎಂದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್
August 28, 2026
9:16 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ
August 28, 2026
8:56 PM
by: ದ ರೂರಲ್ ಮಿರರ್.ಕಾಂ
101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ
August 28, 2026
8:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?
August 28, 2026
2:10 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror