ಬಾಲ್ಯ ವಿವಾಹ ತಡೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯತ್ ಗಳಿಗೆ ವಹಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ರಾಜ್ಯದಲ್ಲಿ ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಬಾಲ್ಯ ವಿವಾಹ ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯತ್ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯತ್ ಗಳೀಗೆ ವಿವಾಹ ನೋಂದಣಿ ಅಧಿಕಾರ ನೀಡಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel