ಮೂರು ದಿನಗಳ ಹಿಂದೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮಾಸ್ಕ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ. ನಗರ ಪ್ರದೇಶದಲ್ಲಿ ರೂ.1000 ಹಾಗೂ ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ಹಾಕಲಾಗುತ್ತದೆ ಎಂದು ತಿಳಿಸಿದ್ದರು. ಇದನ್ನು ರಾಜ್ಯ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಿತ್ತು.
ಆದರೆ ಇದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರಕಟಣೆ ಹೊರಡಿಸಿದ್ದು, ಇತ್ತೀಚೆಗೆ ರಾಜ್ಯ ಸರ್ಕಾರವು ನಗರ ಪ್ರದೇಶದಲ್ಲಿ ಮಾಸ್ಕ್ ಬಳಸದಿದ್ದರೆ ರೂ.1000 ದಂಡ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ ವಿಧಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿತ್ತು. ಆದರೆ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನಲೆಯಲ್ಲಿ ದಂಡದ ಪ್ರಮಾಣದಲ್ಲಿ ನಗರ ಪ್ರದೇಶದಲ್ಲಿ ರೂ.1000 ದಿಂದ ರೂ.250 ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500ರಿಂದ ರೂ.100ಕ್ಕೆ ಇಳಿಸಲು ತೀರ್ಮಾನಿಸಲಾಗಿರುತ್ತದೆ. ಈ ಮೂಲಕ ಸರಕಾರದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಂದು ಅವರು ತಿಳಿಸಿದ್ದಾರೆ.
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…
ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…
ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…
ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…