ಶಿವಮೊಗ್ಗದಲ್ಲಿ(shivamogga) ಇತ್ತೀಚೆಗೆ ಕೊಲೆಯಾದ ಹರ್ಷ(Harsha) ನಿವಾಸದ ಬಳಿ ದುಷ್ಕರ್ಮಿಗಳು ಅವಾಚ್ಯ ಪದ ಬಳಸಿ ಗಲಾಟೆ ನಡೆಸಿದ್ದು, ಈ ಸಂದರ್ಭ ಯುವನೊಬ್ಬನಿಗೆ ಗಾಯವಾಗಿದೆ. ಹೀಗಾಗಿ ಅಶಾಂತಿ ಉಂಟಾಗಿ ಶಿವಮೊಗ್ಗದಲ್ಲಿ ಮತ್ತೆ ಕಲ್ಲು ತೂರಾಟ ಸಹ ನಡೆಸಲಾಗಿದೆ. ಪೊಲೀಸರು ಬಿಗು ಬಂದೋಬಸ್ತ್ ಕೈಗೊಂಡಿದ್ದಾರೆ.
ಶಿವಮೊಗ್ಗ ನಗರದ ಕೆಲವು ಭಾಗಗಳಲ್ಲಿ ಅಪರಿಚಿತರು ಲಾಂಗು ಮತ್ತು ಮಚ್ಚು ಝಳಪಿಸುತ್ತಾ ಭಯದ ವಾತಾವರಣ ನಿರ್ಮಿಸಲು ಮುಂದಾಗಿದ್ದರು ಎಂದು ವರದಿಯಾಗಿದೆ. ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದ ದುಷ್ಕರ್ಮಿಗಳು ಮೃತ ಹರ್ಷ ಕುಟುಂಬಸ್ಥರಿಗೆ ದುಷ್ಕರ್ಮಿಗಳಿಂದ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿದು ಸ್ಥಳೀಯರು ಹೋದಾಗ ದುಷ್ಕರ್ಮಿಗಳು ಓಡಿದ್ದಾರೆ. ಈ ಸಂದರ್ಭ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಗ್ಗೆ ವರದಿಯಾಗಿದೆ. ಕಲ್ಲು ತೂರಟದಲ್ಲಿ ಪ್ರಕಾಶ್ ಎಂಬವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಾತ್ರಿ ಮೂರು ಬೈಕ್‌ಗಳಲ್ಲಿ ಸುಮಾರು 9 ಮಂದಿ ಮಾಸ್ಕ್ ಹಾಕಿಕೊಂಡು ಹೋಗುತ್ತಿದ್ದರು ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವಿಜಯ್ ಎಂಬವರ ಹತ್ಯೆಯಾಗಿದೆ. ಆದರೆ ಈ ಹತ್ಯೆ ಪರಿಚಿತರಿಂದಲೇ ನಡೆದಿದ್ದು, ಖಾಸಗಿ ವಿಚಾರದಲ್ಲಿ ಈ ಕೃತ್ಯ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಈ ಬಗ್ಗೆಯೂ ತನಿಖೆ ನಡೆಯುತ್ತಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…