ಕ್ರಿಮಿನಲ್‌ ಕಾನೂನಿನಲ್ಲಿ ಭಾರಿ ಬದಲಾವಣೆ | ಅಪ್ರಾಪ್ತೆಯರ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್‌ ರೇಪ್‌ಗೆ 20 ವರ್ಷ ಜೈಲು | ಲೋಕಸಭೆಯಲ್ಲಿ ಮಸೂದೆ ಮಂಡಿಸಿದ ಅಮಿತ್‌ ಶಾ |

August 11, 2023
8:23 PM
ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಗುಂಪು ಹಿಂಸಾಚಾರಕ್ಕೆ ಮರಣದಂಡನೆ ಶಿಕ್ಷೆ ವಿಧಿಸುವುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಸಾಮೂಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ.

ಕೊನೆಗೂ ಸರ್ಕಾರ ಎಚ್ಚೆತ್ತಂತಿದೆ. ಅದೆಷ್ಟು ಹೆಣ್ಣು ಮಕ್ಕಳ ಬದುಕು ಪ್ರಪಂಚ ನೋಡುವ ಮುನ್ನವೇ ಕಮರಿ ಹೋಗಿದೆ. ಜೀವನದ ಆಸೆಗಳನ್ನು ಕಟ್ಟಿಕೊಂಡಿದ್ದ ಅದೆಷ್ಟೋ ಹೆಣ್ಣು ಮಕ್ಕಳ ಕನಸು ಕಾಮುಕರ ಕೈಗೆ ಸಿಲುಕಿ ಮಣ್ಣುಪಾಲಾಗಿದೆ. ಇವರಿಗೆಲ್ಲ ತಕ್ಕ ಶಾಸ್ತಿಯಾಗಬೇಕಾದರೆ ಕಾನೂನು ಬದಲಾಗಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತು. ಅದಕ್ಕೆ ಇಂದು ದಿನ ಕೂಡಿ ಬಂದಿದೆ. ಕ್ರಿಮಿನಲ್ ಕಾನೂನುಗಳನ್ನು ಪರಿಷ್ಕರಿಸುವ ಮೂರು ಮಸೂದೆಗಳನ್ನು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರು ಲೋಕಸಭೆಯಲ್ಲಿ  ಮಂಡಿಸಿದ್ದಾರೆ.

Advertisement
Advertisement

ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಹೊಸ ಮಸೂದೆಯನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದರು. ಹೊಸ ಮಸೂದೆಗಳೊಂದಿಗೆ ಸರ್ಕಾರವು ನ್ಯಾಯವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆಯೇ ಹೊರತು, ಶಿಕ್ಷೆಯನ್ನಲ್ಲ ಎಂದು ಮಸೂದೆ ಮಂಡನೆ ವೇಳೆ ಅಮಿತ್‌ ಶಾ ತಿಳಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಗುಂಪು ಹಿಂಸಾಚಾರಕ್ಕೆ ಮರಣದಂಡನೆ #DeathPenalty ಶಿಕ್ಷೆ ವಿಧಿಸುವುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಸಾಮೂಹಿಕ ಅತ್ಯಾಚಾರ #Gangrape ಪ್ರಕರಣಗಳಲ್ಲಿ ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ. ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯಿದೆಯನ್ನು ಬದಲಿಸುವ ಮಸೂದೆಯನ್ನು ಅಮಿತ್‌ ಶಾ ಮಂಡಿಸಿದ್ದಾರೆ.

Advertisement

ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಸಂಪೂರ್ಣವಾಗಿ ರದ್ದುಗೊಳಿಸುವ ನಿಬಂಧನೆಯನ್ನು ಮಸೂದೆ ಹೊಂದಿದೆ. ಮಸೂದೆಯು IPCಯನ್ನು ಬದಲಿಸುವ ಗುರಿಯನ್ನು ಹೊಂದಿದೆ ಎಂದು ಅಮಿತ್‌ ಶಾ ಸಂಸತ್‌ನಲ್ಲಿ ಹೇಳಿದ್ದಾರೆ. ಅಪರಾಧದ ತೀವ್ರತೆಗೆ ಅನುಗುಣವಾಗಿ ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ, ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಲಂಚ ನೀಡಿದರೆ ಒಂದು ವರ್ಷ ಜೈಲು ಶಿಕ್ಷೆ, ಸಾಮೂಹಿಕ ಅತ್ಯಾಚಾರಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ, ಅಪ್ರಾಪ್ತೆಯರ ಅತ್ಯಾಚಾರಕ್ಕೆ ಮರಣದಂಡನೆ ಅಂಶಗಳನ್ನು ಮಸೂದೆ ಒಳಗೊಂಡಿದೆ. 1860 ರ ಭಾರತೀಯ ದಂಡ ಸಂಹಿತೆಯನ್ನು ಭಾರತೀಯ ನ್ಯಾಯ ಸಂಹಿತಾದಿಂದ ಬದಲಾಯಿಸಲಾಗುವುದು. ಮೊದಲು 511 ವಿಭಾಗಗಳಿದ್ದವು, ಆದರೆ ಈಗ ಅದು 356 ವಿಭಾಗಗಳನ್ನು ಹೊಂದಿರುತ್ತದೆ. 175 ಪರಿಚ್ಛೇದಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Source : Digital Media

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

 ಕಸ್ತೂರಿ ರಂಗನ್ ವರದಿ ಬಗ್ಗೆ ಕೋರ್ಟ್‌ಗೆ ಮನವರಿಕೆ | ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ |
October 8, 2024
11:03 PM
by: ದ ರೂರಲ್ ಮಿರರ್.ಕಾಂ
 ದಸರಾ ಅಂಗವಾಗಿ  ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ | ಮೊದಲ ಬಹುಮಾನ 1 ಲಕ್ಷ |
October 8, 2024
10:20 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಯಂತ್ರಿಸಲು ಕ್ರಮ | ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ತಿಂಗಳಲ್ಲಿ 265 ಮಂದಿ ತಂಬಾಕಿನಿಂದ ದೂರ |
October 8, 2024
8:25 PM
by: ದ ರೂರಲ್ ಮಿರರ್.ಕಾಂ
 ರಾಸುಗಳಿಗೆ ತಪ್ಪದೇ ಜೀವ ವಿಮೆ ಮಾಡಿಸಿ
October 8, 2024
8:16 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror