ಕೊನೆಗೂ ಸರ್ಕಾರ ಎಚ್ಚೆತ್ತಂತಿದೆ. ಅದೆಷ್ಟು ಹೆಣ್ಣು ಮಕ್ಕಳ ಬದುಕು ಪ್ರಪಂಚ ನೋಡುವ ಮುನ್ನವೇ ಕಮರಿ ಹೋಗಿದೆ. ಜೀವನದ ಆಸೆಗಳನ್ನು ಕಟ್ಟಿಕೊಂಡಿದ್ದ ಅದೆಷ್ಟೋ ಹೆಣ್ಣು ಮಕ್ಕಳ ಕನಸು ಕಾಮುಕರ ಕೈಗೆ ಸಿಲುಕಿ ಮಣ್ಣುಪಾಲಾಗಿದೆ. ಇವರಿಗೆಲ್ಲ ತಕ್ಕ ಶಾಸ್ತಿಯಾಗಬೇಕಾದರೆ ಕಾನೂನು ಬದಲಾಗಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿ ಬರುತ್ತಿತ್ತು. ಅದಕ್ಕೆ ಇಂದು ದಿನ ಕೂಡಿ ಬಂದಿದೆ. ಕ್ರಿಮಿನಲ್ ಕಾನೂನುಗಳನ್ನು ಪರಿಷ್ಕರಿಸುವ ಮೂರು ಮಸೂದೆಗಳನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಲೋಕಸಭೆಯಲ್ಲಿ ಮಂಡಿಸಿದ್ದಾರೆ.
ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಹೊಸ ಮಸೂದೆಯನ್ನು ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದರು. ಹೊಸ ಮಸೂದೆಗಳೊಂದಿಗೆ ಸರ್ಕಾರವು ನ್ಯಾಯವನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿದೆಯೇ ಹೊರತು, ಶಿಕ್ಷೆಯನ್ನಲ್ಲ ಎಂದು ಮಸೂದೆ ಮಂಡನೆ ವೇಳೆ ಅಮಿತ್ ಶಾ ತಿಳಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರ ಹಾಗೂ ಗುಂಪು ಹಿಂಸಾಚಾರಕ್ಕೆ ಮರಣದಂಡನೆ #DeathPenalty ಶಿಕ್ಷೆ ವಿಧಿಸುವುದನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಅಲ್ಲದೇ ಸಾಮೂಹಿಕ ಅತ್ಯಾಚಾರ #Gangrape ಪ್ರಕರಣಗಳಲ್ಲಿ ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಲಾಗಿದೆ. ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷಿ ಕಾಯಿದೆಯನ್ನು ಬದಲಿಸುವ ಮಸೂದೆಯನ್ನು ಅಮಿತ್ ಶಾ ಮಂಡಿಸಿದ್ದಾರೆ.
ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಸಂಪೂರ್ಣವಾಗಿ ರದ್ದುಗೊಳಿಸುವ ನಿಬಂಧನೆಯನ್ನು ಮಸೂದೆ ಹೊಂದಿದೆ. ಮಸೂದೆಯು IPCಯನ್ನು ಬದಲಿಸುವ ಗುರಿಯನ್ನು ಹೊಂದಿದೆ ಎಂದು ಅಮಿತ್ ಶಾ ಸಂಸತ್‌ನಲ್ಲಿ ಹೇಳಿದ್ದಾರೆ. ಅಪರಾಧದ ತೀವ್ರತೆಗೆ ಅನುಗುಣವಾಗಿ ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆ, ಚುನಾವಣಾ ಸಂದರ್ಭದಲ್ಲಿ ಮತದಾರರಿಗೆ ಲಂಚ ನೀಡಿದರೆ ಒಂದು ವರ್ಷ ಜೈಲು ಶಿಕ್ಷೆ, ಸಾಮೂಹಿಕ ಅತ್ಯಾಚಾರಕ್ಕಾಗಿ 20 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ, ಅಪ್ರಾಪ್ತೆಯರ ಅತ್ಯಾಚಾರಕ್ಕೆ ಮರಣದಂಡನೆ ಅಂಶಗಳನ್ನು ಮಸೂದೆ ಒಳಗೊಂಡಿದೆ. 1860 ರ ಭಾರತೀಯ ದಂಡ ಸಂಹಿತೆಯನ್ನು ಭಾರತೀಯ ನ್ಯಾಯ ಸಂಹಿತಾದಿಂದ ಬದಲಾಯಿಸಲಾಗುವುದು. ಮೊದಲು 511 ವಿಭಾಗಗಳಿದ್ದವು, ಆದರೆ ಈಗ ಅದು 356 ವಿಭಾಗಗಳನ್ನು ಹೊಂದಿರುತ್ತದೆ. 175 ಪರಿಚ್ಛೇದಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Source : Digital Media
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…
ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…
ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…
ಉಪಗ್ರಹ ದತ್ತಾಂಶ ಆಧಾರಿತ CREA ವಿಶ್ಲೇಷಣೆಯ ಪ್ರಕಾರ, ಭಾರತದ 4,041 ನಗರಗಳಲ್ಲಿ 1,787…