ಕೇರಳದ ವಯನಾಡಿಲ್ಲಿ ಸಂಭವಿಸಿದ ಭೀಕರ ಭೂ ಕುಸಿತ ದುರಂತದ ಬೆನ್ನಲ್ಲೇ ಹಿಮಾಚಲ ಪ್ರದೇಶದಲ್ಲೂ ಅಂತಹದ್ದೇ ದುರ್ಘಟನೆ ನಡೆದಿದೆ. ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ ಸಂಭವಿಸಿದೆ. ದುರ್ಘಟನೆಯಲ್ಲಿ 11 ಮಂದಿ ಬಲಿಯಾಗಿದ್ದಾರೆ. ಸುಮಾರು 50 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಹಿಮಾಚಲ ಪ್ರದೇಶದ ಎರಡು ಕಡೆ ಮೇಘಸ್ಫೋಟ(Cloud bust) ಸಂಭವಿಸಿದೆ. ಬುಧವಾರ-ಗುರುವಾರ ಮಧ್ಯರಾತ್ರಿ 1 ಗಂಟೆಗೆ ಈ ಮೇಘಸ್ಫೋಟವು ಸಂಭವಿಸಿದೆ. ಭಾರಿ ಮಳೆಯಿಂದಾಗಿ ಅನೇಕ ಮನೆಗಳು ಮತ್ತು ರಸ್ತೆಗಳು ಕೊಚ್ಚಿಹೋಗಿವೆ. ಎರಡು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ.
ಉತ್ತರಾಖಂಡದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಜನಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಚಾರ್ ಧಾಮ್ ಯಾತ್ರೆಗೆ ಬರುವ ಜನರಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚನೆ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಭೂಕುಸಿತ ಉಂಟಾಗಿದ್ದು, ಭಾರೀ ಮೋಡ ಕವಿದಿದ್ದರಿಂದ ಹಗಲು ಹೊತ್ತಿನಲ್ಲೂ ಕತ್ತಲು ಪರಿಸ್ಥಿತಿ ಉಂಟಾಗಿದೆ, ನದಿಗಳು ಮತ್ತು ಚರಂಡಿಗಳು ತುಂಬಿ ಹರಿಯುತ್ತಿದ್ದು, ತೆಹ್ರಿ-ಘನ್ಸಾಲಿಯ ಜಖನ್ಯಾಲಿ ಬಳಿಯ ನೌತಾಡ್ ಗದ್ರೆಯಲ್ಲಿ ಮೋಘ ಸ್ಫೋಟದಿಂದಾಗಿ 2 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸೋನ್‌ಪ್ರಯಾಗ ಮತ್ತು ಗೌರಿಕುಂಡ್ ನಡುವೆ ಸಿಕ್ಕಿಬಿದ್ದ ಸುಮಾರು 571 ಕೇದಾರನಾಥ ಯಾತ್ರಾರ್ಥಿಗಳನ್ನು ಮೇಘಸ್ಫೋಟದ ನಂತರ ರಕ್ಷಿಸಲಾಗಿದೆ. ಸೋನ್‌ಪ್ರಯಾಗದಿಂದ ಸುಮಾರು 2 ಕಿಮೀ ದೂರದಲ್ಲಿ ಭೂಕುಸಿತದಿಂದಾಗಿ ಸುಮಾರು 1,500 ಯಾತ್ರಾರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಗೌರಿಕುಂಡ್ ಮತ್ತು ಕೇದಾರನಾಥ ನಡುವೆ ಸಿಲುಕಿರುವವರನ್ನು ಸ್ಥಳಾಂತರಿಸಲು ಚಾಪರ್‌ಗಳನ್ನು ಬಳಸಲಾಗಿದೆ.
Source: ಅಂತರ್ಜಾಲ ಮಾಹಿತಿ
Following the tragic landslide disaster in Wayanad, Kerala, Himachal Pradesh also experienced a similar incident. A cloudburst occurred on two sides of the state, resulting in the loss of 11 lives and leaving over 50 people missing.
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…
ಗ್ರಾಹಕರಿಗೆ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ…