ರಾಜ್ಯದಲ್ಲಿ ಏರುಗತಿಯಲ್ಲಿ ಸಾಗುತ್ತಿದೆ ತಾಪಮಾನ | ಹಲವೆಡೆ ಗರಿಷ್ಠ ಉಷ್ಣಾಂಶ ದಾಖಲು | ಕೆಲವು ಕಡೆ ಮಳೆಯ ಸಾಧ್ಯತೆಯೂ ಇದೆ ಎಂದ ಹವಾಮಾನ ಇಲಾಖೆ |

March 8, 2024
6:12 PM

ದಿನದಿಂದ ದಿನಕ್ಕೆ ರಾಜ್ಯದ(State) ಬಿಸಿಲ ತಾಪಮಾನ (Temperature) ಏರು ಗತಿಯಲ್ಲಿ ಸಾಗುತಿದೆ. ಗರಿಷ್ಠ ಪ್ರಮಾಣಕ್ಕೆ ಉಷ್ಣಾಂಶ ಹೆಚ್ಚಾಗಿದ್ದು, ಜನರು ತತ್ತರಿಸುವಂತಾಗಿದೆ. ಉತ್ತರ ಕರ್ನಾಟಕದ (Karnataka)ಹಲವೆಡೆ ಗರಿಷ್ಠ ಉಷ್ಣಾಂಶ ದಾಖಲು ಆಗಿದೆ. ಕಲ್ಬುರ್ಗಿ 39, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಬೆಂಗಳೂರಿನಲ್ಲಿ(Bengaluru) ಬಿಸಿಲಿನ ತಾಪಮಾನ ಜಾಸ್ತಿಯಾಗಿದ್ದು, ನಾಲ್ಕು ವರ್ಷದ ದಾಖಲೆಯನ್ನು ಮುರಿದಿದೆ. ಪೂರ್ವ ಭಾಗದ ಸಮುದ್ರದ ನೀರಿನ ಉಷ್ಣಾಂಶ 1.5ಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದ್ದು, ಇದನ್ನು ಏಲಿನೋ(El-ino) ಎಂದು ಕರೆಯುತ್ತಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಮೂರು ತಿಂಗಳು ವಾಡಿಕೆಗಿಂತ 70% ಹೆಚ್ಚು ಉಷ್ಣತೆ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ(Meteorological Department) ಹೇಳಿದೆ. ಇಡೀ ರಾಜ್ಯದಲ್ಲೇ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮುಂದಿನ ಮೂರು ತಿಂಗಳಲ್ಲಿ ಕಾಣಬಹುದಾಗಿದೆ. ಅದೇ ರೀತಿ ಮಾರ್ಚ್ನಿಂದ ಮೇ ವೇಳೆಯಲ್ಲಿ ವಾಡಿಕೆಗಿಂತ 70% ರಷ್ಟು ಮಳೆಯಾಗುವ(Rain) ಸಾಧ್ಯತೆ ಕೂಡ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಗರಿಷ್ಠ ತಾಪಮಾನ ಸಾಧ್ಯತೆ : ಶುಕ್ರವಾರ ಉತ್ತರ ಒಳನಾಡು ಜಿಲ್ಲೆಗಳಲ್ಲಿ 36 ರಿಂದ 39 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲು ಆಗಿದೆ. ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ 34 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ಉಷ್ಣಾಂಶ ದಾಖಲಾಗಿದೆ. ಮಾರ್ಚ್‌ ಅಂತ್ಯದ ವೇಳೆಗೆ 40 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗುವ ಸಾಧ್ಯತೆ ಎಂದು ಹವಾಮಾನ ತಜ್ಞ ಸಿಎಸ್‌ ಪಾಟೀಲ ಅವರು ತಿಳಿಸಿದ್ದಾರೆ.

The temperature has risen to the maximum in the state. Maximum temperature has been recorded in many parts of North Karnataka. Kalburgi 39, Raichur and Koppal districts recorded 38 degrees Celsius.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror