ರಾಜ್ಯದ ಕೆಲವೆಡೆ ಮಳೆಯಾಗಿದೆ. ಅತಿಹೆಚ್ಚು ಉಷ್ಣಾಂಶ 42.2 ಡಿಗ್ರಿ ಸೆಲ್ಸಿಯೆಸ್ ಕಲಬುರಗಿಯಲ್ಲಿ ದಾಖಲಾಗಿದೆ. ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಂದೆರಡು ಸ್ಥಳಗಳಲ್ಲಿ ಇಂದು ಗುಡುಗು ಸಹಿತ ಹಗುರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3 ಡಿಗ್ರಿಯಷ್ಟು ಏರಿಕೆಯಾಗಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel