ಯಾರ್ಯಾರು ತೆರಿಗೆದಾರರಿದ್ದೀರಿ(Tax payers) ತಪ್ಪದೇ ನಿಮ್ಮ ಆಧಾರ ಕಾರ್ಡ್(Adhar card) ಹಾಗೂ ಪ್ಯಾನ್ ಕಾರ್ಡ್‌ನ್ನು(Pan card) ಲಿಂಕ್ ಮಾಡಿಸಿ(PAN Aadhaar Link). ಇಲ್ಲವಾದಲ್ಲಿ ಡಬಲ್ ತೆರಿಗೆ(Tax) ಬೀಳೋದು ಪಕ್ಕಾ. ಹೆಚ್ಚಿನ ದರದಲ್ಲಿ ತೆರಿಗೆ ಕಡಿತ ತಪ್ಪಿಸಲು ಮೇ 31ರೊಳಗೆ ಸಾರ್ವಜನಿಕರು ತಪ್ಪದೇ ಪ್ಯಾನ್ ಕಾರ್ಡ್ನೊಂದಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ (IT) ತೆರಿಗೆದಾರರಿಗೆ ತಿಳಿಸಿದೆ.
ಆದಾಯ ತೆರಿಗೆ ನಿಯಮಗಳ ಪ್ರಕಾರ, ಶಾಶ್ವತ ಖಾತೆ ಸಂಖ್ಯೆ (PAN) ಅನ್ನು ಬಯೋಮೆಟ್ರಿಕ್ ಆಧಾರ್‌ನೊಂದಿಗೆ ಲಿಂಕ್ ಮಾಡದೇ ಇದ್ದರೆ, ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ಅನ್ನು ಅನ್ವಯಿಸುವ ದರಕ್ಕಿಂತ ಎರಡು ಪಟ್ಟು ಕಡಿತಗೊಳಿಸಲಾಗುತ್ತದೆ. ಅಂದರೆ, ಶೇ.10ರ ಬದಲಾಗಿ ಶೇ.20ರಷ್ಟು ಟಿಡಿಎಸ್ ಮಾಡಲಾಗುತ್ತದೆ ಎಂದು ಹೇಳಿದೆ.
ಕಳೆದ ತಿಂಗಳು ಆದಾಯ ತೆರಿಗೆ ಇಲಾಖೆ ಈ ಕುರಿತು ಮೊದಲ ಸುತ್ತೋಲೆ ಹೊರಡಿಸಿದೆ. ತೆರಿಗೆದಾರರು ಮೇ 31ರೊಳಗೆ ತಮ್ಮ ಪ್ಯಾನ್ ಜೊತೆಗೆ ಆಧಾರ್ ಲಿಂಕ್ ಮಾಡಿದರೆ ಹೆಚ್ಚಿನ ಟಿಡಿಎಸ್ ಕಡಿತಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದಿತ್ತು. ಇದೇ ವೇಳೆ, ಬ್ಯಾಂಕ್‌ಗಳು ಹಾಗು ಹಣಕಾಸು ವ್ಯವಹಾರ ನಡೆಸುವ ಇತರೆ ಸಂಸ್ಥೆಗಳು ಕೂಡಾ ವ್ಯವಹಾರದ ವಿವರವಾದ ಮಾಹಿತಿ ಸಲ್ಲಿಸಬೇಕು ಎಂದು ಸೂಚಿಸಿತ್ತು.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…