ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಬೇಕೆಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸೇಡಂ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಮಟ್ಟದ ’ಟಾಸ್ಕ್ ಪೋರ್ಸ್’ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಂಚಾಯತ್ ಮಟ್ಟದಲ್ಲಿ ಪಿಡಿಓಗಳು ಬೋರ್‌ವೆಲ್‌ಗಳು ಹಾಗೂ ಜಲ ಮೂಲಗಳನ್ನು ಪರೀಕ್ಷಿಸಿ ಕ್ರಮ ಕೈಗೊಂಡು ವರದಿ ಸಲ್ಲಿಸಬೇಕು. ಹೆಚ್ಚು ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಶಾಶ್ವತ ಬೋರ್‌ವೆಲ್ ಕೊರೆಸಿ, ಜನರ ಅನುಕೂಲಕ್ಕೆ ತಕ್ಕಂತೆ ನೀರು ಪೂರೈಕೆ ಮಾಡಬೇಕು ಎಂದು ತಿಳಿಸಿದ್ದಾರೆ. ಪಿಡಿಓಗಳು ಗ್ರಾಮಗಳಿಗೆ ಭೇಟಿ ನೀಡಿ ಒಂದು ವಾರದಲ್ಲಿ ವರದಿ ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel