ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮ ವಹಿಸಲು ಅಧಿಕಾರಿಗಳಿಗೆ ಉಪಲೋಕಾಯುಕ್ತರು ಸೂಚನೆ

May 16, 2025
9:34 PM

ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಅಗಿಲೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ ಹಸಿಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಣೆ ಮಾಡಿ ಶೇಖರಣೆ ಮಾಡುವುದರ ಜೊತೆಗೆ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಹಸಿ ಕಸವನ್ನು ಶೇಖರಣೆ ಮಾಡುವ ಸ್ಥಳದಿಂದ ಕೊಳಕು ನೀರು ಹರಿದು ಹೋಗಲು ಚರಂಡಿ ಮಾಡಬೇಕು ಅದಕ್ಕೆ ಮುಚ್ಚಿರಬೇಕು ಚರಂಡಿ ಸ್ವಚ್ಛತೆಗಾಗಿ ಒಂದೆರಡು ಕಡೆ ಮುಚ್ಚಳ ತೆಗೆದು ಸ್ವಚ್ಛತೆ ಮಾಡುವಂತೆ ನಿರ್ಮಾಣ ಮಾಡಬೇಕು ಎಂದು ತಿಳಿಸಿದರಲ್ಲದೆ, ಕೊಳಕು ನೀರು ಹರಿದು ಒಂದು ಕಡೆ ಶೇಖರಣೆ ಆಗುವಂತೆ ಒಂದು ದೊಡ್ಡ ಹೊಂಡ ನಿರ್ಮಾಣ ಮಾಡಬೇಕು ಈ ಕೊಳಚೆ ನೀರು ಸಂಸ್ಕರಣೆ ಮಾಡಿ ಕೃಷಿ ಚಟುವಟಿಕೆಗೆ ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.  ಈ ಘಟಕದಲ್ಲಿ ಉತ್ಪಾದನೆ ಆಗುವ ಗೊಬ್ಬರವನ್ನು ಸ್ಥಳೀಯ ರೈತರು ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ರೈತರು ಸಂಪರ್ಕ ಮಾಡುವ ಸ್ಥಳಗಳಲ್ಲಿ ದರ ಮತ್ತು ಗೊಬ್ಬರದ ದಾಸ್ತಾನು ಬಗ್ಗೆ ಫಲಕಗಳಲ್ಲಿ ಅಳವಡಿಸುವಂತೆ ಸೂಚಿಸಿದರು. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದಿರುವುದರಿಂದ ಸುತ್ತಮುತ್ತಲಿನ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪರಿಸರ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿ ವರದಿ ನೀಡುವಂತೆ ಸೂಚಿಸಿದ ಉಪ ಲೋಕಾಯುಕ್ತರು ನಗರ ಸಭೆ ಆರೋಗ್ಯ ಅಧಿಕಾರಿಗಳು ಸ್ಥಳೀಯರಿಂದ ಮಾಹಿತಿ ಪಡೆಯಲು ನಿರ್ದೇಶನ ನೀಡಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದರ್ಶಿತ್‌ ಕೆ ಎಸ್
July 7, 2025
11:04 PM
by: ದ ರೂರಲ್ ಮಿರರ್.ಕಾಂ
ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ | ಸಚಿವ ದಿನೇಶ್ ಗುಂಡೂರಾವ್
July 7, 2025
9:25 PM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಸಮಾವೇಶ | ಕನಿಷ್ಠ ಬೆಂಬಲ ಬೆಲೆ ಮೂಲಕ ರೈತರ ಹಿತರಕ್ಷಣೆ
July 7, 2025
9:17 PM
by: The Rural Mirror ಸುದ್ದಿಜಾಲ
ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಪ್ರದೇಶ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ
July 7, 2025
8:58 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group