ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಅವರು ಅಗಿಲೆಯಲ್ಲಿರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿ ಹಸಿಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಣೆ ಮಾಡಿ ಶೇಖರಣೆ ಮಾಡುವುದರ ಜೊತೆಗೆ ವೈಜ್ಞಾನಿಕವಾಗಿ ಕಸ ವಿಲೇವಾರಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಹಸಿ ಕಸವನ್ನು ಶೇಖರಣೆ ಮಾಡುವ ಸ್ಥಳದಿಂದ ಕೊಳಕು ನೀರು ಹರಿದು ಹೋಗಲು ಚರಂಡಿ ಮಾಡಬೇಕು ಅದಕ್ಕೆ ಮುಚ್ಚಿರಬೇಕು ಚರಂಡಿ ಸ್ವಚ್ಛತೆಗಾಗಿ ಒಂದೆರಡು ಕಡೆ ಮುಚ್ಚಳ ತೆಗೆದು ಸ್ವಚ್ಛತೆ ಮಾಡುವಂತೆ ನಿರ್ಮಾಣ ಮಾಡಬೇಕು ಎಂದು ತಿಳಿಸಿದರಲ್ಲದೆ, ಕೊಳಕು ನೀರು ಹರಿದು ಒಂದು ಕಡೆ ಶೇಖರಣೆ ಆಗುವಂತೆ ಒಂದು ದೊಡ್ಡ ಹೊಂಡ ನಿರ್ಮಾಣ ಮಾಡಬೇಕು ಈ ಕೊಳಚೆ ನೀರು ಸಂಸ್ಕರಣೆ ಮಾಡಿ ಕೃಷಿ ಚಟುವಟಿಕೆಗೆ ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಈ ಘಟಕದಲ್ಲಿ ಉತ್ಪಾದನೆ ಆಗುವ ಗೊಬ್ಬರವನ್ನು ಸ್ಥಳೀಯ ರೈತರು ಬಳಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ರೈತರು ಸಂಪರ್ಕ ಮಾಡುವ ಸ್ಥಳಗಳಲ್ಲಿ ದರ ಮತ್ತು ಗೊಬ್ಬರದ ದಾಸ್ತಾನು ಬಗ್ಗೆ ಫಲಕಗಳಲ್ಲಿ ಅಳವಡಿಸುವಂತೆ ಸೂಚಿಸಿದರು. ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದಿರುವುದರಿಂದ ಸುತ್ತಮುತ್ತಲಿನ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪರಿಸರ ಇಲಾಖೆ ಅಧಿಕಾರಿಗಳು ಸರ್ವೆ ಮಾಡಿ ವರದಿ ನೀಡುವಂತೆ ಸೂಚಿಸಿದ ಉಪ ಲೋಕಾಯುಕ್ತರು ನಗರ ಸಭೆ ಆರೋಗ್ಯ ಅಧಿಕಾರಿಗಳು ಸ್ಥಳೀಯರಿಂದ ಮಾಹಿತಿ ಪಡೆಯಲು ನಿರ್ದೇಶನ ನೀಡಿದರು.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…