ತಂಬಾಕನ್ನು ನಿಯಂತ್ರಿಸಲು ಜಿಲ್ಲಾ, ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ, ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
2024ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 265 ಜನರು ತಂಬಾಕು ತ್ಯಜಿಸಿದ್ದಾರೆ. ಶಾಲಾ-ಕಾಲೇಜುಗಳ ಆವರಣಗಳಲ್ಲಿ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.
ಯಾದಗಿರಿ ಜಿಲ್ಲೆಯ ಗ್ರಾಮಗಳು, ಶಾಲಾ-ಕಾಲೇಜುಗಳನ್ನು ತಂಬಾಕು ಮುಕ್ತ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಂಬಾಕು ಮುಕ್ತ ಯುವ ಅಭಿಯಾನ ಹಾಗೂ ತಂಬಾಕು ನಿಯಂತ್ರಣ ಸಭೆ ನಡೆಸಿ ಮಾತನಾಡಿದ ಅವರು, ಬಸ್ ನಿಲ್ದಾಣ, ರೈಲು ನಿಲ್ದಾಣ, ಸರಕಾರಿ ಕಚೇರಿಗಳನ್ನು ತಂಬಾಕು ಮುಕ್ತ ವಲಯಗಳನ್ನಾಗಿಸಬೇಕು. ವಿಶೇಷವಾಗಿ ಯುವ ಜನತೆಯಲ್ಲಿ ತಂಬಾಕು ಉತ್ಪನ್ನಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.