ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ ನೀರು ಮಲಿನಗೊಳಿಸುವುದನ್ನು ತಡೆಗಟ್ಟಲು ನಿಯಮಗಳನ್ನು ರೂಪಿಸಿ ಏಜೆನ್ಸಿಗೆ ಟೆಂಡರ್ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನದಿ ಪಾತ್ರದಲ್ಲಿ ಅಸ್ತಿ ವಿಸರ್ಜನೆ ಸೇರಿದಂತೆ ಸ್ನಾನ ಮಾಡಿದ ನಂತರ ಬಟ್ಟೆಗಳನ್ನು ನೀರಿಗೆ ಬಿಸಾಡುವುದು ಸಾಮಾನ್ಯವಾಗಿದ್ದು, ಕಾವೇರಿ ನದಿ ಪಾತ್ರದಲ್ಲಿ ಮಾಲಿನ್ಯವನ್ನು ತಡೆಗಟ್ಟಲು ಅಸ್ತಿ ವಿಸರ್ಜನೆಗೆ ದರ ನಿಗದಿ ಪಡಿಸಿ, ನೋಡಿಕೊಳ್ಳಲು ಏಜೆನ್ಸಿಯನ್ನು ನೇಮಕ ಮಾಡಲಾಗಿದೆ ಎಂದರು. ಅಸ್ತಿ ವಿಸರ್ಜನೆಗೆ ನಿಗದಿಪಡಿಸಿರುವ ಸ್ಥಳಗಳನ್ನು ಹೊರತು ಪಡಿಸಿ ಸಾರ್ವಜನಿಕರು ಕಾವೇರಿ ನದಿ ಪಾತ್ರದ ಬೇರೆ ಸ್ಥಳಗಳಲ್ಲಿ ಅಸ್ತಿ ವಿಸರ್ಜನೆ ಮಾಡದಂತೆ ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


