ರಾಜ್ಯದ ಎಲ್ಲಾ ಉಪ ವಿಭಾಗಾಧಿಕಾರಿಗಳ ಜೊತೆ ಉಪ ವಿಭಾಗಾಧಿಕಾರಿಗಳ ಕೋರ್ಟ್ ಗಳಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಸಂಬಂಧಿಸಿದಂತೆ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸಸೌಧ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ರೈತರಿಗೆ ಶೀಘ್ರ ನ್ಯಾಯ ಒದಗಿಸುವ ಸಲುವಾಗಿ, ರೆಗ್ಯುಲರ್ ಕೋರ್ಟ್ ಗಳ ಜೊತೆ ತುಮಕೂರು ಮಂಡ್ಯ ಮೈಸೂರು ರಾಮನಗರ ಬೆಂಗಳೂರು ಗ್ರಾಮಾಂತರ, ಕುಂದಾಪುರ ಸೇರಿ 11 ಜಿಲ್ಲೆಗಳಲ್ಲಿ 20ಕ್ಕೂ ಅಧಿಕ ವಿಶೇಷ ನ್ಯಾಯಾಲಯಗಳಿಗೆ ಚಾಲನೆ ನೀಡಲಾಗಿದೆ. ಸಭೆಯಲ್ಲಿ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೂ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ್ದಾರೆ. ಕಳೆದ ವರ್ಷ ಜುಲೈ ನಲ್ಲಿ ಎಸಿ ಕೋರ್ಟ್ ಗಳಲ್ಲಿ ರಾಜ್ಯಾದ್ಯಂತ RTC – NON RRT ಪ್ರಕರಣಗಳು ಸೇರಿದಂತೆ ಒಟ್ಟಾರೆ 73ಸಾವಿರದ 682 ತಕರಾರು ಪ್ರಕರಣಗಳು ಬಾಕಿ ಇದ್ದವು. ಈ ಪ್ರಕರಣಗಳ ಸಂಖ್ಯೆಯನ್ನು ಇದೀಗ 40,475ಕ್ಕೆ ಇಳಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 33,207 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…