ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಳವಾಗುತ್ತಿದೆ, ಜೊತೆಗೇ ಕುರಿ ಕೋಳಿಗಳ ಮಾರಾಟ ಹೆಚ್ಚಾಗುತ್ತಿತ್ತು. ಸಾಮಾನ್ಯವಾಗಿ ಚಳಿಗಾಲದಲ್ಲಿ ಕುರಿ ಮತ್ತು ಕೋಳಿ ಮಾಂಸ ಉತ್ಪಾದನೆಯು ಇಳಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ಬೇಡಿಕೆಯೂ ಹೆಚ್ಚಳವಾಗುತ್ತಿದ್ದು, ಮಾಂಸ ಮಾರಾಟದ ಬೆಲೆಯಲ್ಲಿ ಭರ್ಜರಿ ಹೆಚ್ಚಳವಾಗಿದೆ. ಕುರಿ ಮತ್ತು ಕೋಳಿ ಉತ್ಪಾದನೆಯಲ್ಲಿ ಕುಸಿತ ಕಂಡಿದೆ.
ಚಿಲ್ಲರೆ ಮಾರುಕಟ್ಟೆಗಳಲ್ಲಿ ಚಿಕನ್ ಬೆಲೆಯು ಪ್ರತಿ ಕೆಜಿಗೆ 290 ರೂಪಾಯಿ ತಲುಪಿದ್ದು, ಡಿಸೆಂಬರ್ ಅಂತ್ಯದ ವೇಳೆಗೆ 300 ರೂಪಾಯಿ ಗಡಿ ದಾಟುವ ನಿರೀಕ್ಷೆಯಿದೆ. ಇತ್ತೀಚಿಗೆ ಮೊಟ್ಟೆ ಬೆಲೆಯಲ್ಲಿ ಭರ್ಜರಿ ಹೆಚ್ಚಳವಾಗಿತ್ತು. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ಮುಟ್ಟಿದಂತೆ ಆಗಿದೆ. ಮಟನ್ ಬೆಲೆಯಲ್ಲೂ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಚಿಕನ್ ಹಾಗೂ ಮಟನ್ ಬೆಲೆಯು ಗರಿಷ್ಠ ಏರಿಕೆ ಕಂಡಿದೆ. ಪ್ರತಿ ಮಟನ್ ಬೆಲೆಯು 900 ಆಗಿದೆ. ಇನ್ನಷ್ಟು ಹೆಚ್ಚಳವಾಗುವ ನಿರೀಕ್ಷೆಯಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

