ಅಡಿಕೆ ಮರಗಳನ್ನು ಕಾಡುತ್ತಿರುವ ಎಲೆಚುಕ್ಕೆ ರೋಗಕ್ಕೆ ಸೂಕ್ತ ಪರಿಹಾರ ಕಾಣುವ ನಿಟ್ಟಿನಲ್ಲಿ ಕೃಷಿಕರಿಗೆ ಉಚಿತ ಔಷಧಿ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ಸುಳ್ಯದಲ್ಲಿ ಮಾತನಾಡಿದ ಅವರು ಅಡಿಕೆ ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗ ಈಗ ಗಂಭೀರ ಸ್ವರೂಪದಲ್ಲಿ ಅಡಿಕೆ ಕೃಷಿಕರನ್ನು ಕಾಡುತ್ತಿದೆ. ಈ ಬಗ್ಗೆ ಇತ್ತೀಚೆಗೆ ತೋಟಗಾರಿಕೆ ಸಚಿವ ಮುನಿರತ್ನ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು. ಅಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸುಳ್ಯ ಸೇರಿದಂತೆ ದಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಯ ಬಗ್ಗೆ ಗಮನಕ್ಕೆ ತರಲಾಗಿದೆ. ಸದ್ಯದಲ್ಲೇ ಸುಳ್ಯಕ್ಕೆ ತೋಟಗಾರಿಕೆ ಸಚಿವರು ಬಂದು ರೈತರ ಅಭಿಪ್ರಾಯ ಸಂಗ್ರಹಿಸುವರು ಎಂದು ಅವರು ಹೇಳಿದರು. ಇದರ ಜೊತೆಗೆ ದೋಟಿಗೆ ಸಹಾಯಧನ ನೀಡುವ ಬಗ್ಗೆಯೂ ಸರ್ಕಾರ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel