Advertisement
MIRROR FOCUS

₹250 ಕೋಟಿ ಅಡಿಕೆ ತೆರಿಗೆ ವಂಚನೆ | ಮೀರತ್‌ನಲ್ಲಿ DGGI ದಾಳಿ, 4 ಮಂದಿ ಬಂಧನ

Share

ಅಡಿಕೆ ವ್ಯಾಪಾರದಲ್ಲಿ ಸಂಭವಿಸಿರುವ ದೊಡ್ಡ ಮಟ್ಟದ ತೆರಿಗೆ ವಂಚನಾ ಪ್ರಕರಣವೊಂದನ್ನು ಕೇಂದ್ರ ಸರಕಾರದ ಸರಕು ಮತ್ತು ಸೇವಾ ತೆರಿಗೆ ಗುಪ್ತಚರ ನಿರ್ದೇಶನಾಲಯ (DGGI) ಪತ್ತೆಹಚ್ಚಿದೆ. ಮೀರತ್ ವಲಯದಲ್ಲಿ ಅಡಿಕೆ ಸಾಗಣೆ ಮತ್ತು ವಿತರಣೆಯ ಹೆಸರಿನಲ್ಲಿ ನಡೆದಿರುವ ₹250 ಕೋಟಿ ಮೊತ್ತದ ಜಿಎಸ್‌ಟಿ ತಪ್ಪಿಸುವ ಜಾಲವನ್ನು ಡಿಜಿಜಿಐ ಅಧಿಕಾರಿಗಳು ಭೇದಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ಅಡಿಕೆ ಸಾಗಣೆಗಾಗಿ ನಕಲಿ ದಾಖಲೆಗಳು, ಬೋಗಸ್ ಕಂಪನಿಗಳು, ಅಸಲಿ ಅಲ್ಲದ ಇನ್ವಾಯ್ಸ್‌ಗಳನ್ನು ಬಳಸಿಕೊಂಡು ಜಿಎಸ್‌ಟಿ ತಪ್ಪಿಸುವ ಜಾಲವನ್ನು ಮಾಡಲಾಗಿತ್ತು.  ವ್ಯಾಪಾರ ಜಾಲವು ಹಲವು ಜಿಲ್ಲೆಗಳ ಮೂಲಕ ವಿಸ್ತರಿಸಿಕೊಂಡಿದ್ದು, ಮೀರತ್ ವಲಯ ಪ್ರಮುಖ ಕೇಂದ್ರವಾಗಿತ್ತು ಎಂದು ತಿಳಿದುಬಂದಿದೆ.

ಡಿಜಿಜಿಐ ದಾಳಿ ವೇಳೆ ಮಹತ್ವದ ಸಾಕ್ಷ್ಯ ವಶಪಡಿಸಿಕೊಂಡಿದ್ದು, ಡಿಜಿಜಿಐ ನಡೆಸಿದ ದಾಳಿ ವೇಳೆ ಲೆಕ್ಕಪತ್ರಗಳು, ವ್ಯಾಪಾರ ದಾಖಲೆಗಳು, ಡಿಜಿಟಲ್ ಸಾಕ್ಷ್ಯಗಳು, ಅನುಮಾನಾಸ್ಪದ ವಿತರಣಾ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಜಾಲವು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಕಾರ್ಯನಿರ್ವಹಿಸಿರುವ ಸಾಧ್ಯತೆ ಇರುವುದರಿಂದ ತನಿಖೆಯನ್ನು ವಿಸ್ತರಿಸಲಾಗುತ್ತಿದೆ. ಭಾರತದಾದ್ಯಂತ ಸುಮಾರು ₹5,000 ಕೋಟಿ ಮೌಲ್ಯದ ಅಡಿಕೆಯನ್ನು ಪಾನ್ ಮಸಾಲಾ ತಯಾರಕರಿಗೆ ಸಾಗಿಸಿದೆ ಎಂದು ಆರೋಪಿಸಲಾಗಿದೆ.

ಅಡಿಕೆ ಮಾರುಕಟ್ಟೆ ಮತ್ತು ಕೃಷಿಕರ ಬದುಕಿಗೆ ಅತ್ಯಂತ ಮುಖ್ಯವಾದ ಬೆಳೆ ಅಡಿಕೆ. ಆದರೆ ಇಂತಹ ವಂಚನಾ ಚಟುವಟಿಕೆಗಳು ವ್ಯಾಪಾರದ ನಂಬಿಕೆಗೆ ಧಕ್ಕೆ, ಮಾರುಕಟ್ಟೆಯಲ್ಲಿ ಅಸ್ಥಿರತೆ, ಕೃಷಿಕರ ಆದಾಯಕ್ಕೆ ಪರೋಕ್ಷ ಹೊಡೆತ ಉಂಟು ಮಾಡುತ್ತದೆ ಎಂದು  ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣವು ಅಡಿಕೆ ವ್ಯಾಪಾರದಲ್ಲಿ ನಡೆಯುತ್ತಿರುವ ಅಕ್ರಮ ವ್ಯವಹಾರಗಳ ಮೇಲೆ ಬೆಳಕು ಚೆಲ್ಲಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಬಂಧನಗಳ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ….

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 hours ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

9 hours ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

9 hours ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

9 hours ago

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

17 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

18 hours ago