ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ ಆದ್ಯತೆ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲೆಯ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ ನಡೆಸಿದ ಅವರು, ಸಂಭಾವ್ಯ ಭೂಕುಸಿತ ಪ್ರದೇಶಗಳನ್ನು ಮೊದಲೇ ಗುರುತಿಸಿ, ಅಲ್ಲಿ ನೆಲೆಸಿರುವವರನ್ನು ಸ್ಥಳಾಂತರಿಸಬೇಕು. ಸ್ಥಳೀಯ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣವೇ ಸ್ಪಂದಿಸಬೇಕು. ತಾಲೂಕು ಮತ್ತು ಜಿಲ್ಲಾ ಮಟ್ಟದ ಕಂಟ್ರೋಲ್ ರೂಂಗಳು ದಿನದ 24 ಗಂಟೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ನಗರದ ಪಂಪ್ ವೆಲ್, ಕೊಟ್ಟಾರಚೌಕಿ, ಕೆತ್ತಿಕಲ್ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿವರ್ಷ ಮಳೆಯಿಂದ ಸಮಸ್ಯೆ ಉಂಟಾಗುತ್ತಿರುವ ಸ್ಥಳಗಳಲ್ಲಿ ಶಾಶ್ವತ ಪರಿಹಾರಕ್ಕೆ ಹೆದ್ದಾರಿ ಪ್ರಾಧಿಕಾರವು ಸೂಕ್ತ ತಂತ್ರಜ್ಞಾನ ಅನ್ವಯಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವ ದಿನೇಶ್ ಗುಂಡೂರಾವ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು. ನಂತರ ಅವರು, ಪ್ರಾಕೃತಿಕ ವಿಕೋಪದಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಇದೇ ಸಂದರ್ಭ ಅವರು ರಾಜ್ಯ ಸರಕಾರದ ವತಿಯಿಂದ ತಲಾ ಐದು ಲಕ್ಷ ಪರಿಹಾರ ನೆರವು ವಿತರಿಸಿದರು.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…