ಕರ್ನಾಟಕ ಸಿಎಂ | ಇನ್ನೂ ನಡೆಯದ ಆಯ್ಕೆ | ನಾಳೆ ಇನ್ನೊಂದು ಸುತ್ತಿನ ಸಭೆ | ನಾಳೆಯೇ ಸಿಎಂ ಹೆಸರು ಘೋಷಣೆ ?

May 16, 2023
9:25 PM

ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ  ಕಾಂಗ್ರೆಸ್‌ ಬಹುಮತ ಪಡೆದಿದೆ. ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಸಿದ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌ ನಡುವೆ ಪೈಪೋಟಿ ಏರ್ಪಟ್ಟಿದ್ದು ಕರ್ನಾಟಕ ಹೊಸ ಸಿಎಂ  ಆಯ್ಕೆ ಇನ್ನೂ ಕಗ್ಗಂಟಾಗಿದೆ. ಇಂದೂ ಆಯ್ಕೆ ನಡೆಯಲಿಲ್ಲ, ನಾಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಸೇರಿಸಿ ಸಭೆ ನಡೆಸಲು  ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ. ನಾಳೆಯೇ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ.

ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಭೆ ನಡೆದವು. ಆದರೆ ಸಿಎಂ ಆಯ್ಕೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಕಾಂಗ್ರೆಸ್ ಹೈಕಮಾಂಡ್ ವಿಫಲವಾಗಿದೆ.  ಸಿದ್ದರಾಮಯ್ಯ  ಹಾಗೂ ಡಿಕೆ ಶಿವಕುಮಾರ್  ಇಬ್ಬರೂ ಪೈಪೋಟಿ ನಡೆಸುತ್ತಿದ್ದಾರೆ. ನಾನೇ ಪೂರ್ಣಾವಧಿಗೇ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರೆ,  ಬೇರೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ, ಹಾಗೊಂದು ವೇಳೆ ನೀವೇ ಸಿಎಂ ಆಗಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿ ಕೆ ಶಿವಕುಮಾರ್‌ ಹೇಳಿದ್ದಾರೆ.ಹೀಗಾಗಿ ಎಲ್ಲಾ ಸಭೆಗಳೂ ಮಂಗಳವಾರವೂ ವಿಫಲವಾದವು. ಇದಕ್ಕಾಗಿ ಬುಧವಾರ ಮತ್ತೆ ಸಭೆ ನಡೆಯಲಿದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror