ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಬಹುಮತ ಪಡೆದಿದೆ. ಇದೀಗ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಸಿದ್ಧರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದ್ದು ಕರ್ನಾಟಕ ಹೊಸ ಸಿಎಂ ಆಯ್ಕೆ ಇನ್ನೂ ಕಗ್ಗಂಟಾಗಿದೆ. ಇಂದೂ ಆಯ್ಕೆ ನಡೆಯಲಿಲ್ಲ, ನಾಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರನ್ನೂ ಸೇರಿಸಿ ಸಭೆ ನಡೆಸಲು ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಿದ್ದಾರೆ. ನಾಳೆಯೇ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸುವ ಸಾಧ್ಯತೆ ಇದೆ.
ಇಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಸಭೆ ನಡೆದವು. ಆದರೆ ಸಿಎಂ ಆಯ್ಕೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬರಲು ಕಾಂಗ್ರೆಸ್ ಹೈಕಮಾಂಡ್ ವಿಫಲವಾಗಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಪೈಪೋಟಿ ನಡೆಸುತ್ತಿದ್ದಾರೆ. ನಾನೇ ಪೂರ್ಣಾವಧಿಗೇ ಸಿಎಂ ಆಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರೆ, ಬೇರೆಯವರಿಗೆ ಸಿಎಂ ಸ್ಥಾನ ಬಿಟ್ಟುಕೊಡುವುದಕ್ಕೆ ಸಾಧ್ಯವೇ ಇಲ್ಲ, ಹಾಗೊಂದು ವೇಳೆ ನೀವೇ ಸಿಎಂ ಆಗಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ಹೀಗಾಗಿ ಎಲ್ಲಾ ಸಭೆಗಳೂ ಮಂಗಳವಾರವೂ ವಿಫಲವಾದವು. ಇದಕ್ಕಾಗಿ ಬುಧವಾರ ಮತ್ತೆ ಸಭೆ ನಡೆಯಲಿದೆ.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…