ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕೃಷಿ ಕ್ಷೇತ್ರದ ಪ್ರಗತಿ ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಿದರು. ಮುಂಗಾರು ಬೆಳೆಗಳ ಪರಿಸ್ಥಿತಿ, ಹಿಂಗಾರು ಬಿತ್ತನೆ ಸಿದ್ಧತೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಬೆಳೆ ಪರಿಸ್ಥಿತಿ, ಬೆಲೆ ಪ್ರವೃತ್ತಿಗಳು, ರಸಗೊಬ್ಬರ ಲಭ್ಯತೆ ಮತ್ತು ಜಲಾಶಯಗಳ ಸಂಗ್ರಹಣಾ ಮಟ್ಟಗಳನ್ನು, ಸಭೆಯು ಸಮಗ್ರವಾಗಿ ಮೌಲ್ಯಮಾಪನ ಮಾಡಿತು.
ಸಭೆಯಲ್ಲಿ ಕೇಂದ್ರ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು. ಕಳೆದ ವರ್ಷಕ್ಕೆ ಹೋಲಿಸಿದರೆ, ಮುಂಗಾರು ಬೆಳೆಗಳ ಒಟ್ಟು ವಿಸ್ತೀರ್ಣ 6.51 ಲಕ್ಷ ಹೆಕ್ಟೇರ್ ಗಳಷ್ಟು ಹೆಚ್ಚಾಗಿದೆ. ನೀರಿನ ಲಭ್ಯತೆಗೆ ಸಂಬಂಧಿಸಿದಂತೆ, ದೇಶಾದ್ಯಂತ ಜಲಾಶಯಗಳ ಸಂಗ್ರಹಣಾ ಮಟ್ಟ, ಕಳೆದ ವರ್ಷದ ಇದೇ ಅವಧಿಗೆ ಮತ್ತು ಕಳೆದ ದಶಕದ ಸರಾಸರಿಗೆ ಹೋಲಿಸಿದರೆ, ಗಮನಾರ್ಹವಾಗಿ ಉತ್ತಮವಾಗಿದೆ. ರಸಗೊಬ್ಬರಗಳ ಲಭ್ಯತೆಯನ್ನು ಪರಿಶೀಲಿಸಿದ ಸಚಿವರು, ಮುಂಬರುವ ದಿನಗಳಲ್ಲಿ ಸುಗಮ ಮತ್ತು ಸಕಾಲಿಕ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಯಾವುದೇ ಅಡೆತಡೆಗಳನ್ನು ನಿವಾರಿಸಲು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದೊಂದಿಗೆ ನಿಕಟ ಸಮನ್ವಯವನ್ನು ಕಾಯ್ದುಕೊಳ್ಳಬೇಕೆಂದು, ಅವರು ಸೂಚನೆ ನೀಡಿದರು.

