ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದಲ್ಲಿ ನಡೆಯುತ್ತಿರುವ ಸ್ವಚ್ಛ ಗುತ್ತಿಗಾರು ಅಭಿಯಾನವು ಕಳೆದ 11 ವಾರಗಳಿಂದ ನಿರಂತರವಾಗಿ ನಡೆಯುತ್ತಿದೆ. ಸ್ವಚ್ಛತಾ ಟಾಸ್ಕ್ ಫೋರ್ಸ್ ಹಾಗೂ ಗುತ್ತಿಗಾರು ಗ್ರಾಪಂ , ಸಂಜೀವಿನ ಒಕ್ಕೂಟ, ವರ್ತಕ ಸಂಘ ಹಾಗೂ ಇತರ ಸಂಘಗಳ ಸಹಕಾರದೊಂದಿಗೆ ಈ ಕಾರ್ಯ ಪ್ರತೀ ವಾರ ಸ್ವಚ್ಛತಾ ಜಾಗೃತಿ ಅಭಿಯಾನ ಹಾಗೂ ಸ್ವಚ್ಛತಾ ಕಾರ್ಯ ನಡೆಯುತ್ತಿದೆ. ಇದೀಗ ಸಂಜೀವಿನಿ ತಂಡವು ವಾರ್ಡ್ ಮಟ್ಟದಲ್ಲಿ ಈ ಕಾರ್ಯವನ್ನು ನಡೆಸುತ್ತಿದೆ.
ಬುಧವಾರ ಸ್ವಚ್ಚತಾ ಕಾರ್ಯವನ್ನು ಗುತ್ತಿಗಾರು ಗ್ರಾಮ ಪಂಚಾಯತ್ ಮಟ್ಟದ ಅಮರ ಸಂಜೀವಿನಿ ಒಕ್ಕೂಟದ ವತಿಯಿಂದ ಕಡ್ತಲ್ ಕಜೆ- ವಳಲಂಬೆ- ಕಾಜಿಮಡ್ಕ- ವಳಲಂಬೆ ಅಂಗವಾಡಿ-ಹಾಗೂ ವಳಲಂಬೆಯ ರಸ್ತೆ ಬದಿಗಳಲ್ಲಿ ಸ್ವಚ್ಚತೆ ಮಾಡಲಾಯಿತು. ರಸ್ತೆ ಬದಿಗಳಲ್ಲಿದ್ದ ಕಸವನ್ನು ಗೋಣಿಚೀಲದಲ್ಲಿ ತುಂಬಿಸಿಡಲಾಯಿತು.ಬೆಳಗ್ಗೆ 10ಗಂಟೆಗೆ ಆರಂಭವಾದ ಸ್ವಚ್ಚತಾ ಕಾರ್ಯಕ್ರಮ ಪಂಚಾಯತ್ ಅಧ್ಯಕ್ಷರಾದ ಸುಮಿತ್ರ ಮೂಕಮಲೆ ಉಪಸ್ಥಿತಿಯಲ್ಲಿ ಮುಂದುವರೆಯಿತು.
ಈ ಸ್ವಚ್ಚತಾ ಕಾರ್ಯದಲ್ಲಿ ಶಂಖಪಾಲ ಸ್ತ್ರೀ ಶಕ್ತಿ, ಶಂಖಶ್ರೀ ಸ್ತ್ರೀ ಶಕ್ತಿ, ಶ್ರೀ ದುರ್ಗಾ ಸ್ತ್ರೀ ಶಕ್ತಿ, ಯಶಸ್ವಿ ಸಂಜೀವಿನಿ, ಬಾಂಧವ್ಯ ಸಂಜೀವಿನಿ,ಚಿಗುರು ಸಂಜೀವಿನಿ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆ,ಆಶಾಕಾರ್ಯಕರ್ತೆ,ಅಮರ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ, ಎಲ್.ಸಿ.ಆರ್.ಪಿಗಳು, ಪಶುಸಖಿ,ಕೃಷಿ ಸಖಿ ಹಾಗೂ ವಾರ್ಡ್ ಪದಾಧಿಕಾರಿಗಳು ಭಾಗವಹಿಸಿದ್ದರು.
ಅಲ್ಲಲ್ಲಿ ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…
ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…
ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…
ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…
ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.