ಗಣೇಶ ಚತುರ್ಥಿಯ ವೇಳೆ ಸಾರ್ವಜನಿಕ ಗಣೇಶೋತ್ಸವವನ್ನು ಆಚರಿಸಲಾಗುತ್ತದೆ. ಗಣೇಶನ ವಿಸರ್ಜನೆಯ ವಿಷಯ ಬಂದಾಗ, ಗಣೇಶ ವಿಸರ್ಜನೆಗೆ ಉತ್ತಮ ಮತ್ತು ಸುರಕ್ಷಿತ ವ್ಯವಸ್ಥೆ ಮಾಡಿಕೊಡಬೇಕೆಂದು ಪುತ್ತೂರಿನ ಸಹಾಯಕ ಕಮೀಶನರ್ ಅವರಿಗೆ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.
ಹಿಂದೂ ಧರ್ಮಶಾಸ್ತ್ರದಂತೆ ಗಣೇಶನ ಮೂರ್ತಿಯ ವಿಸರ್ಜನೆಯನ್ನು ಹರಿಯುವ ನೀರಿನಲ್ಲಿ ಮಾಡಬೇಕೆಂದಿದೆ. ಆದರೆ ಕೆಲವರು ಇದರ ಬಗ್ಗೆ ಪರಿಸರ ಮಾಲಿನ್ಯದ ನೆಪವೊಡ್ಡಿ ಹರಿಯುವ ನೀರಿನಲ್ಲಿ ವಿಸರ್ಜಿಸುವ ಬದಲು ಕೆರೆ ಮತ್ತು ಸರೋವರಗಳಲ್ಲಿ ಹಾಗೂ ಕೃತಕ ಟ್ಯಾಂಕ್ ವ್ಯವಸ್ಥೆಯನ್ನು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಾಡಲಾಗುತ್ತದೆ. ಸರ್ಕಾರವು ಇದರ ಬಗ್ಗೆ ಗಮನವಹಿಸಿ ಹರಿಯುವ ನೀರಿನಲ್ಲಿ ಗಣೇಶ ವಿಸರ್ಜನೆಯ ವ್ಯವಸ್ಥೆ ಮಾಡಿಕೊಡಬೇಕು ಜೊತೆಗೆ ಈ ವೇಳೆಯಲ್ಲಿ ಅಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನಹರಿಸಬೇಕು. ಮೂರ್ತಿಕಾರರಿಗೆ ಪ್ಲಾಸ್ಟರ್ ಆಫ್ ಪ್ಯಾರೀಸ್ ನ ಮೂರ್ತಿ ಮಾಡದೇ ಮಣ್ಣಿನ ಮೂರ್ತಿಯನ್ನೇ ಮಾಡುವಂತೆ ಪ್ರೇರೇಪಿಸಿ ಅದಕ್ಕಾಗಿ ಅವರಿಗೆ ಸರ್ಕಾರದ ವತಿಯಿಂದ ಅನುದಾನ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಹಿಂದೂ ಜನಜಾಗೃತಿ ಸಮಿತಿ ವತಿಯಿಂದ, ಸಾರ್ವಜನಿಕ ಗಣೇಶೋತ್ಸವದ ವಿಸರ್ಜನೆಯನ್ನು ಆದರ್ಶ ರೀತಿಯಲ್ಲಿ ವ್ಯವಸ್ಥೆ ಮಾಡುವ ಬಗ್ಗೆ ಪುತ್ತೂರಿನ ಶ್ರೀಯುತ ಸಹಾಯಕ ಮಾಹಿತಿ ಅಧಿಕಾರಿಯಾದ ಶ್ರೀ. ಚಂದ್ರಶೇಖರ ಎಚ್ ಎಂ ಇವರಿಗೆ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಗತಿ ಸ್ಟಡಿ ಸೆಂಟರ್ ಸಂಚಾಲಕರು ಗೋಕುಲದಾಸ್, ಧರ್ಮಪ್ರೇಮಿಗಳಾದ ಶ್ರೀಧರ ಪೂಜಾರಿ, ಶರತ್ ಕೃಷ್ಣ ನಗರ, . ಹರಿಪ್ರಸಾದ್ ಶೆಟ್ಟಿ, ಚಂದ್ರಶೇಖರ, ಚಂದ್ರ ಮೊಗೇರ ಉಪಸ್ಥಿತರಿದ್ದರು.
ಕ್ರಿಶನ್ ಎಸ್ ಭಟ್, ಮೇರಿ ಹಿಲ್, 1ನೇ ತರಗತಿ, ಎಸ್ಡಿಎಂ ಶಾಲೆ, ಮಂಗಳೂರು…
ಮುಂದಿನ 2 ರಿಂದ 3 ದಿನಗಳಲ್ಲಿ ದೇಶದ ಪೂರ್ವ, ಪಶ್ಚಿಮ, ಮಧ್ಯ ಮತ್ತು…
ರೈತರು ಹೊಲಗಳಲ್ಲಿ ಬಳಕೆ ಮಾಡುತ್ತಿರುವ ರಸಗೊಬ್ಬರಗಳು ಅಸಲಿಯೇ ಅಥವಾ ನಕಲಿಯೇ ಎಂಬುದನ್ನು ವೈಜ್ಞಾನಿಕ…
ಕೃಷಿಯಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳುವ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ದೂರಶಿಕ್ಷಣದ ಮೂಲಕ ತರಬೇತಿ…
ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ…