ದಾನ ಮಾಡುವ ವಿಧಾನ ಮತ್ತು ಅದರ ಫಲಗಳು | ದಾನ ಮಾಡುವುದರ ಪ್ರಯೋಜನವೇನು..? | ದಾನವನ್ನು ಹೇಗೆ ಮಾಡಬೇಕು..? |

March 9, 2024
2:44 PM

ಸನಾತನ ಧರ್ಮದಲ್ಲಿ(Santana Dharma) ದಾನಕ್ಕೆ(Donation) ವಿಶೇಷ ಮಹತ್ವವಿದೆ. ಧರ್ಮಗ್ರಂಥಗಳಲ್ಲಿ, ದಾನವನ್ನು ಮಾನವ ಜೀವನದ(Human Life) ಪ್ರಮುಖ ಭಾಗವೆಂದು ಪರಿಗಣಿಸಲಾಗಿದೆ. ದಾನ ಧರ್ಮ ಮಾಡುವ ವ್ಯಕ್ತಿಗೆ ವರ್ತಮಾನದ ಜೊತೆಗೆ ಮುಂದಿನ ಜನ್ಮದಲ್ಲಿ ಪುಣ್ಯ ಫಲ ಸಿಗುತ್ತದೆ ಎಂಬ ನಂಬಿಕೆ ಇದೆ. ಮನುಷ್ಯನು ತನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ದಾನ ಮಾಡುತ್ತಾನೆ, ಆದರೆ ಧರ್ಮಗ್ರಂಥಗಳಲ್ಲಿ ಕೆಲವು ದಾನ ನಿಯಮಗಳನ್ನು ಹೇಳಲಾಗಿದೆ. ಅವುಗಳನ್ನು ಅನುಸರಿಸಿದರೆ, ನಂತರ ದುಪ್ಪಟ್ಟು ದಾನದ ಫಲವನ್ನು ಪಡೆದುಕೊಳ್ಳಬಹುದು. ದಾನದ ನಿಯಮಗಳ ಬಗ್ಗೆ ತಿಳಿಯೋಣ..

Advertisement
Advertisement

1. ಅರಿಶಿನ ದಾನ – ಅರಿಶಿನ ದಾನ ಮಾಡಿದಷ್ಟು ರೋಗ ನಿವಾರಣೆ ಆಗುತ್ತದೆ. ಸುಮಂಗಲಿಯರಿಗೆಸೌಭಾಗ್ಯತನ,ವೃದ್ಧಿಸುತ್ತದೆ.ಸುಮಂಗಲಿಯರಿಗೆ,ಸುಮಂಗಲಿತನಯಾವಾಗಲೂ,ಇರಲಿ ಎಂಬ ಉದ್ದೇಶಕ್ಕೆ ಮೊದಲು ಅರಿಶಿನ ಕೊಡುತ್ತಾರೆ,

2. ಕುಂಕುಮ ದಾನ – ಕುಂಕುಮವನ್ನು ಯಾರು ಧರಿಸುತ್ತಾರೋ ಅವರು ಬಹಳ ತೇಜಸ್ಸು ಮತ್ತ ನಂಬಿಕೆ ಜಾಸ್ತಿ ಆಗುತ್ತದೆ.ಕುಂಕುಮ ಧಾರಣೆಯಿಂದ ದೈವಶಕ್ತಿ ಜಾಸ್ತಿಯಾಗುತ್ತದೆ. ದೃಷ್ಟಿದೋಷ ನಿವಾರಣೆ ಆಗುತ್ತದೆ. ಕೋಪ, ಹಠ, ಕಡಿಮೆ ಆಗುತ್ತದೆ,

3. ಸಿಂಧೂರ ದಾನ – ಸತಿ ಪತಿ ಕಲಹ ನಿವಾರಣೆ. ರೋಗಭಾಧೆ, ಋಣಭಾದೆ ನಿವಾರಣೆ. ಮನೆಯಲ್ಲಿ ಸಂದೇಹ, ಒಳಜಗಳ, ಮಾಂತ್ರಿಕ ದೋಷಗಳು ನಿವಾರಣೆಯಾಗುತ್ತದೆ. ಈ ಕಾರಣಕ್ಕೆ ಶ್ರೀ ಆಂಜನೇಯ ಸ್ವಾಮಿಗೆ ಕೇಸರಿ ಅಲಂಕಾರ ಮಾಡುತ್ತಾರೆ.

4. ಕನ್ನಡಿ ದಾನ – ಕನ್ನಡಿಗೆ ಸಂಸ್ಕೃತದಲ್ಲಿ “ದರ್ಪಣ” ಎನ್ನುತ್ತಾರೆ. ಇದನ್ನು ಯಾರು ಪ್ರತಿದಿನ ನೋಡುತ್ತಾರೆಯೋ ಅವರಿಗೆ ಅಪಮೃತ್ಯು ಬರುವುದಿಲ್ಲ. ಕನ್ನಡಿ ದಾನ ಮಾಡುವುದರಿಂದ ಚರ್ಮವ್ಯಾಧಿ ಬರುವುದಿಲ್ಲ. ದೇವರಿಗೆ, ದೇವಾಲಯಗಳಲ್ಲಿ ದರ್ಪಣ ಸೇವೆ ಮಾಡಿಸಿದರೆ, ನಿಮ್ಮ ಸಮಸ್ತ ಪಾಪಗಳೂ ನಿವಾರಣೆಯಾಗುತ್ತದೆ. ರಾತ್ರಿ ಕಾಲ, ಹಾಗೂ ಒಡೆದ ಕನ್ನಡಿಯನ್ನು ಬಳಸಿದರೆ, ದಾರಿದ್ರ್ಯ ಹಾಗೂ ಬಡತನ ಬರುತ್ತದೆ,

Advertisement

5. ಬಾಚಣಿಗೆ ದಾನ – ಬಾಚಣಿಗೆದಾನಮಾಡುವುದರಿಂದ,ಮುಖದಲ್ಲಿತೇಜಸ್ಸುಹೆಚ್ಚಾಗಿ, ಮನೆಯಲ್ಲಿ ಅಲಂಕಾರದ ವಸ್ತುಗಳು ಜಾಸ್ತಿಯಾಗುತ್ತದೆ,

6. ಕಾಡಿಗೆ ದಾನ – ಕಾಡಿಗೆ ದಾನಮಾಡುವುದರಿಂದ ಕಣ್ಣಿಗೆಸಂಬಂಧಪಟ್ಟದೋಷಗಳು ನಿವಾರಣೆಯಾಗುತ್ತದೆ, ಮನೆಯ ಮೇಲೆ ಆಗಿರುವ, ಅಥವಾ ದಂಪತಿಗಳ ಮೇಲೆ ಆಗಿರುವ ದೃಷ್ಟಿ ದೋಷ ನಿವಾರಣೆಯಾಗುತ್ತದೆ,

7. ಅಕ್ಕಿ ದಾನ – ಅಕ್ಕಿಎಷ್ಟುದಾನಮಾಡುತ್ತೀರೋ ಅಷ್ಟೂ ಅನ್ನಪೂರ್ಣೇಶ್ವರೀ ದೇವಿ ತೃಪ್ತಳಾಗುತ್ತಾಳೆ. ಧನಲಕ್ಷ್ಮೀ ಮನೆಯಲ್ಲಿ ಶಾಶ್ವತವಾಗಿ ನೆಲೆಸುತ್ತಾಳೆ. ಮನೆಯಲ್ಲಿ ಶಾಂತವಾತಾವರಣ ಇದ್ದು, ಮಕ್ಕಳು ಸನ್ಮಾರ್ಗದಲ್ಲಿ ನಡೆಯುತ್ತಾರೆ.

8. ತೊಗರಿಬೇಳೆ ದಾನ – ತೊಗರಿ ಬೇಳೆ ದಾನ ಮಾಡುವುದರಿಂದ, ಕುಜದೋಷ ನಿವಾರಣೆಯಾಗುತ್ತದೆ. ಪ್ರತಿ ದಿವಸ ತೊಗರಿಬೇಳೆಯನ್ನು ಯಾರು ತಿನ್ನುತ್ತಾರೋ ಅವರಿಗೆ ಧೈರ್ಯ ಜಾಸ್ತಿ ಇರುತ್ತದೆ. ಈ ಕಾರಣಕ್ಕೆ ಹುಳಿ ಮತ್ತು ಸಾಂಬಾರ್ ನಲ್ಲಿ ತೊಗರಿಬೇಳೆ ಜಾಸ್ತಿ ಉಪಯೋಗಿಸುವುದು. ತೊಗರಿಬೇಳೆ ದಾನದಿಂದ ಸತಿಪತಿ ಕಲಹ ನಿವಾರಣೆಯಾಗುತ್ತದೆ,

9. ಉದ್ದಿನ ಬೇಳೆ ದಾನ – ಪ್ರತೀ ತಿಂಗಳು, ಪ್ರತೀ ವರ್ಷ, ಮಹಾಲಯ ಅಮಾವಾಸ್ಯೆ, ತರ್ಪಣ ಕೊಡದೇಇದ್ದರೆ,ವೈದಿಕ ಮಾಡುವಾಗದೋಷಗಳಾಗಿದ್ದರೆಜಾತಕದಲ್ಲಿ ಪಿತೃಶಾಪ ಇದ್ದರೆ, ಮಕ್ಕಳು ಕೆಟ್ಟದಾರಿಯಲ್ಲಿ ನಡೆಯುತ್ತಿದ್ದರೆ, ಶತೃಗಳ ಕಾಟ ಜಾಸ್ತಿ ಆಗಿದ್ದರೆ, ಉದ್ದಿನ ಬೇಳೆ ದಾನ ಮಾಡುವುದರಿಂದ ಈ ದೋಷಗಳೆಲ್ಲಾನಿವಾರಣೆಯಾಗುತ್ತದೆ,

Advertisement

10. ತೆಂಗಿನಕಾಯಿ – ತೆಂಗಿನಕಾಯಿಗೆ ಅಧಿದೇವತೆ ಸಂತಾನ ಲಕ್ಷ್ಮೀ, ಇಷ್ಟಾರ್ಥ ಪ್ರದಾಯಿನಿ ಅಂತನೂ ಕರೆಯುತ್ತಾರೆ. ಮಕ್ಕಳಾಗಿಲ್ಲ, ಸಂತಾನ ಸಮಸ್ಯೆಇರುವವರುತೆಂಗಿನಕಾಯಿ, ದಾನ ಮಾಡುತ್ತಾ ಬಂದರೆ ಸಂತಾನವಾಗುತ್ತದೆ. ತಾಂಬೂಲದ,ಜೊತೆ ತೆಂಗಿನಕಾಯಿ ದಾನ ಮಾಡುವುದರಿಂದ, “ಅಶ್ವಮೇಧಯಾಗದ ” ಫಲ ದೊರಕುತ್ತದೆ. ಸಕಲ ಕಷ್ಟಗಳೂ ನಿವಾರಣೆಯಾಗುತ್ತದೆ,

11. ವೀಳ್ಯದೆಲೆ ದಾನ – ವೀಳ್ಯದೆಲೆಗೆ ದೇವತೆ ಧನಲಕ್ಷ್ಮೀ. ವೀಳ್ಯದೆಲೆ ತಾಂಬೂಲ ದಾನ ಮಾಡುವುದರಿಂದ ಅಧಿಕವಾದ ಧನಪ್ರಾಪ್ತಿಯಾಗುತ್ತದೆ.ಮಹಾಲಕ್ಷ್ಮಿಯು ಅಂತಹ ಮನೆಯಲ್ಲಿ ಶಾಶ್ವತವಾಗಿ ನೆಲೆಸಿರುತ್ತಾಳೆ. ಗಂಗಾದೇವಿ ಪ್ರಸನ್ನಳಾಗುತ್ತಾಳೆ. ಮನೆಯ ಮುಂದೆ ವೀಳ್ಯದೆಲೆ ಬಳ್ಳಿ ಬೆಳೆದರೆ, ಆ ಮನೆಯ ಸರ್ವ ದೋಷವೂ, ವಾಸ್ತು ದೋಷವೂ,ನಿವಾರಣೆಯಾಗುತ್ತದೆ.

12.ಅಡಿಕೆ ದಾನ – ಅಡಿಕೆಗೆ ಸಂಸ್ಕೃತದಲ್ಲಿ ಪೂಗೀಫಲ ಎನ್ನುತ್ತಾರೆ. ಯಾರು ತಾಂಬೂಲವನ್ನು ಪ್ರತಿದಿನ ಹಾಕಿಕೊಳ್ಳುತ್ತಾರೋ ಅವರ ಇಷ್ಟಾರ್ಥ ಸಿದ್ಧಿಯಾಗುತ್ತದೆ. ಬಹಳ ಬೇಗ ಬಯಕೆಗಳು ಈಡೇರುತ್ತವೆ. ಬರೀ ಅಡಿಕೆಯನ್ನು ತಿಂದರೆ “ಬ್ರಹ್ಮಹತ್ಯಾದೋಷ” ಬರುತ್ತದೆ.

13. ಫಲದಾನ – ಫಲದಾನಕ್ಕೆಜ್ಞಾನಲಕ್ಷ್ಮಿಅಧಿಪತಿ. ಫಲದಾನ ಮಾಡುವುದರಿಂದ ನಿಮ್ಮ ಕಾರ್ಯಗಳು ಸುಸೂತ್ರವಾಗಿ, ಸುಗಮವಾಗಿ ನಡೆಯುತ್ತದೆ ಹಾಗೂ ಲಾಭದಾಯಕವಾಗುತ್ತದೆ. ಸ್ತ್ರೀಶಾಪ ನಿವಾರಣೆಯಾಗುತ್ತದೆ. ಗುರು ಪೂಜೆ ಮಾಡಿ ಹಣ್ಣು ದಾನ ಮಾಡಿದರೆ ಗುರುದೋಷಗಳು ನಿವಾರಣೆಯಾಗುತ್ತದೆ. ಅಮಾವಾಸ್ಯೆ ಅಥವ ವೈದಿಕದ ದಿನ ಹಣ್ಣುದಾನ ಮಾಡಿದರೆ ಸಕಲ, ಪಿತೃದೋಷ ನಿವಾರಣೆಯಾಗುತ್ತದೆ.

14. ಬೆಲ್ಲದಾನ – ಬೆಲ್ಲದಲ್ಲಿ ಬ್ರಹ್ಮದೇವರು, ಶ್ರೀ ಮಹಾಲಕ್ಷ್ಮಿಯು, ಶ್ರೀ ಮಹಾ ಗಣಪತೀ ದೇವರ ಸಾನಿಧ್ಯ ಇರುತ್ತದೆ. ಬೆಲ್ಲವನ್ನು ದಾನ ಮಾಡಿದರೆ ಬಹಳಷ್ಟು ಯೋಚನೆಗಳು ನಿವಾರಣೆಯಾಗುತ್ತದೆ. ನಿತ್ಯದಾರಿದ್ರ್ಯ ಅನುಭವಿಸುವವರು ಬೆಲ್ಲಕ್ಕೆ ಬಿಲ್ವಪತ್ರೆಯಿಂದ ಪೂಜೆ ಮಾಡುತ್ತಾ ಬಂದರೆ ದಾರಿದ್ರ್ಯ ಹಾಗೂ ಬಡತನ ನಿವಾರಣೆಯಾಗುತ್ತದೆ. ಗಣಪತಿಗೆ ಬೆಲ್ಲ ಮತ್ತು ಮಹಾಲಕ್ಷ್ಮಿಗೆ ಬೆಲ್ಲದನ್ನ ನೈವೇದ್ಯ ಮಾಡಿದರೆ ತುಂಬಾ ವಿಶೇಷ, ಧನ ಧಾನ್ಯ ಸಮೃದ್ಧಿಯಾಗುತ್ತದೆ.

Advertisement

15. ವಸ್ತ್ರ ದಾನ – ವಸ್ತ್ರದಾನ ಮಾಡುವುದರಿಂದ ಕುಲದೇವತೆ ತೃಪ್ತಿಯಾಗುತ್ತಾರೆ, ಸುಮಂಗಲೀ ದೋಷ ನಿವಾರಣೆಯಾಗುತ್ತದೆ. ಸ್ತ್ರೀ ದೋಷ ಮತ್ತು ಶಾಪಗಳು ನಿವಾರಣೆಯಾಗುತ್ತದೆ. ಸಕಲ ದೇವತೆಗಳು ತೃಪ್ತರಾಗುತ್ತಾರೆ. ಆರೋಗ್ಯ ಭಾಗ್ಯವಾಗುತ್ತದೆ. ದಾನವನ್ನು ತೆಗೆದುಕೊಂಡ ವಸ್ತ್ರಗಳನ್ನು, ದಾನಮಾಡಬಾರದು.

16. ಹೆಸರುಬೇಳೆ – ವಿದ್ಯಾಲಕ್ಷ್ಮಿ ಅನುಗ್ರಹವಾಗುತ್ತದೆ. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗುತ್ತಾರೆ. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ. ಹೆಸರುಬೇಳೆ ದಾನದಿಂದ ಸಕಲ ದೇವಿಗಳೂ ತೃಪ್ತರಾಗುತ್ತಾರೆ. ಮಾಟ ಮಂತ್ರ ಮನೆಯ ಮೇಲೆ ಕೆಲಸ ಮಾಡುವುದಿಲ್ಲ. ಹೆಂಗಸರ ಗರ್ಭಕೋಶದ ಸಮಸ್ಯೆ ನಿವಾರಣೆಯಾಗುತ್ತದೆ.

ಬರಹ
ವಿವೇಕಾನಂದ ಆಚಾರ್ಯ

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ
May 16, 2025
9:43 PM
by: The Rural Mirror ಸುದ್ದಿಜಾಲ
ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group