ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

March 14, 2026
6:55 AM
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ವ್ಯಾಪ್ತಿಯ ಜಿಲ್ಲಾ ಹಾಲು ಒಕ್ಕೂಟಗಳ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲಿನ ಗುಣಮಟ್ಟ ಕಾಪಾಡಲು ವಿಶೇಷ ಪರೀಕ್ಷಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಉತ್ಪಾದಕರು ಸರಬರಾಜು ಮಾಡುವ ಹಾಲಿನಲ್ಲಿ ಉಪ್ಪು ಹಾಗೂ ಸಕ್ಕರೆ ಕಲಬೆರಕೆ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾನಾಯಕ ಎನ್‌.ಎಸ್‌. ಬೋಸರಾಜು ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಮಧು ಜಿ. ಮಾದೇಗೌಡ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಅವರು, ಸಹಕಾರ ಸಂಘಗಳಿಗೆ ನೀಡಲಾಗುತ್ತಿರುವ ಈ ಕಿಟ್‌ಗಳ ಮೂಲಕ ನಿರಂತರ ತಪಾಸಣೆ ನಡೆಸಿ ಹಾಲಿನ ಗುಣಮಟ್ಟ ಕಾಪಾಡುವಲ್ಲಿ ಹೆಚ್ಚಿನ ಗಮನ ಹರಿಸಲಾಗುತ್ತಿದೆ ಎಂದು ವಿವರಿಸಿದರು. ಈ ಕ್ರಮದಿಂದ ಗ್ರಾಹಕರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಹಾಲು ಒದಗಿಸಲು ನೆರವಾಗಲಿದೆ ಎಂದು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The Karnataka government has decided to distribute special milk adulteration testing kits to primary dairy cooperative societies under KMF after detecting salt and sugar adulteration in supplied milk.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror