ಎರಡು ಹಂತಗಳಲ್ಲಿ ಹಾಲಿನ ದರ ಏರಿಕೆ | ಒಟ್ಟು ರೂ.7 ಹೆಚ್ಚಳ | ನೇರ ನಗದು ಮೂಲಕ ರೈತರಿಗೆ ಪಾವತಿ

August 18, 2025
10:19 PM

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ  ಹಾಲಿನ ದರ ಒಟ್ಟು 7 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಅರವಿಂದ್ ಬೆಲ್ಲದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶು ಆಹಾರ, ಲಸಿಕೆ, ವೆಚ್ಚ ಸೇರಿದಂತೆ ಇನ್ನಿತರ ಖರ್ಚುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ಉತ್ಪಾದನಾ ವೆಚ್ಚ ಸರಿದೂಗಿಸಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಕಳೆದ ಏಪ್ರಿಲ್ 1ರಿಂದ 4 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದ್ದು, ಅದರ ಸಂಪೂರ್ಣ ಮೊತ್ತವನ್ನು ಹಾಲು ಉತ್ಪಾದಕರ ಖಾತೆಗಳಿಗೆ ನೇರ ನಗದು ಮೂಲಕ ಪಾವತಿ  ಮಾಡಲಾಗುತ್ತಿದೆ ಎಂದರು. ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿದರೂ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರತಿ ಲೀಟರ್ ಹಾಲಿನ ದರ ಕಡಿಮೆ ಇದೆ.

ರಾಜ್ಯದಲ್ಲಿ 16 ಹಾಲು ಒಕ್ಕೂಟಗಳಿದ್ದು 8.89 ಲಕ್ಷ ಸಕ್ರಿಯ ಸದಸ್ಯರಿದ್ದಾರೆ. ಪ್ರತಿನಿತ್ಯ 99.6 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಪ್ರತಿ ಲೀಟರ್ ಹಾಲನ್ನು 35.30 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ. ಗ್ರಾಹಕರಿಗೆ 46 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ಖರೀದಿ ಮತ್ತು ಮಾರಾಟದ ನಡುವಿನ 10.70 ವ್ಯತ್ಯಾಸದ ಹಣವನ್ನು ಹಾಲು ಸಂಗ್ರಹಣೆ, ಸಂಸ್ಕರಣೆ, ಮೂಲಸೌಲಭ್ಯ, ಸಿಬ್ಬಂದಿಗಳ ವೇತನ ಸೇರಿದಂತೆ ಇನ್ನಿತರ ಖರ್ಚುಗಳಿಗೆ ಬಳಸಲಾಗುತ್ತಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror