ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಹಂತಗಳಲ್ಲಿ ಹಾಲಿನ ದರ ಒಟ್ಟು 7 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಅರವಿಂದ್ ಬೆಲ್ಲದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಶು ಆಹಾರ, ಲಸಿಕೆ, ವೆಚ್ಚ ಸೇರಿದಂತೆ ಇನ್ನಿತರ ಖರ್ಚುಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ಉತ್ಪಾದನಾ ವೆಚ್ಚ ಸರಿದೂಗಿಸಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಕಳೆದ ಏಪ್ರಿಲ್ 1ರಿಂದ 4 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿದ್ದು, ಅದರ ಸಂಪೂರ್ಣ ಮೊತ್ತವನ್ನು ಹಾಲು ಉತ್ಪಾದಕರ ಖಾತೆಗಳಿಗೆ ನೇರ ನಗದು ಮೂಲಕ ಪಾವತಿ ಮಾಡಲಾಗುತ್ತಿದೆ ಎಂದರು. ಹಾಲಿನ ದರ 4 ರೂಪಾಯಿ ಹೆಚ್ಚಳ ಮಾಡಿದರೂ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರತಿ ಲೀಟರ್ ಹಾಲಿನ ದರ ಕಡಿಮೆ ಇದೆ.
ರಾಜ್ಯದಲ್ಲಿ 16 ಹಾಲು ಒಕ್ಕೂಟಗಳಿದ್ದು 8.89 ಲಕ್ಷ ಸಕ್ರಿಯ ಸದಸ್ಯರಿದ್ದಾರೆ. ಪ್ರತಿನಿತ್ಯ 99.6 ಲಕ್ಷ ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಪ್ರತಿ ಲೀಟರ್ ಹಾಲನ್ನು 35.30 ರೂಪಾಯಿಗೆ ಖರೀದಿ ಮಾಡಲಾಗುತ್ತಿದೆ. ಗ್ರಾಹಕರಿಗೆ 46 ರೂಪಾಯಿಗೆ ಮಾರಾಟ ಮಾಡಲಾಗುತ್ತಿದ್ದು, ಖರೀದಿ ಮತ್ತು ಮಾರಾಟದ ನಡುವಿನ 10.70 ವ್ಯತ್ಯಾಸದ ಹಣವನ್ನು ಹಾಲು ಸಂಗ್ರಹಣೆ, ಸಂಸ್ಕರಣೆ, ಮೂಲಸೌಲಭ್ಯ, ಸಿಬ್ಬಂದಿಗಳ ವೇತನ ಸೇರಿದಂತೆ ಇನ್ನಿತರ ಖರ್ಚುಗಳಿಗೆ ಬಳಸಲಾಗುತ್ತಿದೆ ಎಂದು ಹೇಳಿದರು.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…