Advertisement
MIRROR FOCUS

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದನೆ

Share

ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಸೋಗಾಲ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಪ್ರತಿನಿತ್ಯ 7500 ಲೀಟರ್ ಹಾಲು ಸಂಗ್ರಹಣೆಯಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲು ಉತ್ಪಾದಿಸುವ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಸರಿಯಾದ ಸಮಯಕ್ಕೆ ರೈತರಿಗೆ ಹಾಲಿನ ಹಣ ಪಾವತಿಯಾಗುತ್ತಿದ್ದು, ಹಸುಗಳ ಹಾರೈಕೆಗೂ ಒತ್ತು ನೀಡಲಾಗುತ್ತಿದೆ. ಬಹುತೇಕ ರೈತರು ಸೀಮೆ ಹಸುಗಳಿಂದಲೇ ಹಾಲು ಉತ್ಪಾದಿಸುತ್ತಿದ್ದು, ಅವುಗಳಿಗೆ ಪಶು ವೈದ್ಯರಿಂದ ಸೂಕ್ತ ತಪಾಸಣೆ, ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಮಾದರಿ ಸಂಘವಾಗಿ ಮಾರ್ಪಟ್ಟಿದೆ.  ಚನ್ನಪಟ್ಟಣ ವ್ಯಾಪ್ತಿಯಲ್ಲಿ 173 ಹಾಲು ಉತ್ಪಾದಕರ ಸಹಕಾರ ಸಂಘಗಳಿದ್ದು, 3 ಸಾವಿರ ಟನ್ ಪಶು ಆಹಾರವನ್ನು ಒದಗಿಸಲಾಗುತ್ತಿದೆ.   ನಿರಂತರವಾಗಿ ಪಶುಗಳ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ.  ತಾಲ್ಲೂಕಿನ ಹೆಚ್ಚಿನ ಜನರು ಹೈನುಗಾರಿಕೆ ಅವಲಂಬಿಸಿದ್ದು, ಜಿಲ್ಲೆಯಲ್ಲಿ ಅತಿ ಹೆಚ್ಚು ಹಾಲಿನ ಉತ್ಪಾದನೆಯಾಗುತ್ತಿದೆ. ರೈತರಿಗೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಶಿಬಿರದ ಉಪ ವ್ಯವಸ್ಥಾಪಕ ಡಾ.ಸಿ.ಆರ್. ಕಿರಣ್ ಹಾಗೂ  ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ಲಿಂಗೇಶ್ ಕುಮಾರ್ ಹೇಳುತ್ತಾರೆ.

ಪ್ರತಿದಿನ 7 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತಿದ್ದು, ಸಂಘ ಉತ್ತಮ ಆದಾಯ ಗಳಿಸುತ್ತಿದೆ , ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಎಲ್ಲ ರೀತಿಯ ಸವಲತ್ತು ನೀಡಲಾಗುತ್ತಿದ್ದು, ರೈತರಿಂದ ಉತ್ತಮ ಪ್ರೋತ್ಸಾಹ ಹಾಗೂ ಸಹಕಾರ ದೊರೆಯುತ್ತಿದೆ ಎಂದು  ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ದೊಡ್ಡ ಬಸೇಗೌಡ ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

1 hour ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

21 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago