ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಸಸ್ಯಹಾರ ತಿನಿಸುಗಳಿಗೆ ಮಾತ್ರ ಅವಕಾಶವಿದ್ದು, ಪ್ರತಿ ಸ್ಪರ್ಧಿಗೆ ಸಿರಿಧಾನ್ಯದ ಒಂದೇ ತಿನಿಸು (ಅಡುಗೆ)ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಹಾಗೂ ಒಂದು ಮರೆತು ಹೋದ ಖಾಧ್ಯವನ್ನು ಮಾಡಲು ಅವಕಾಶವಿರುತ್ತದೆ. ಅರ್ಜಿಯಲ್ಲಿ ನಮೂದಿಸಿದ ತಿನಿಸಿಗಳನ್ನು ಮನೆಯಲ್ಲಿಯೇ ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು. ಸ್ಪರ್ಧೆಯನ್ನು ಡಿಸೆಂಬರ್ ಮೊದಲನೇ ವಾರದಲ್ಲಿ ಏರ್ಪಡಿಸಲಾಗುತ್ತದೆ. ವಿಜೇತರಿಗೆ ನಗದು ಬಹುಮಾನ ನೀಡಲಾಗುತ್ತದೆ.
ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಕಚೇರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು. ಅಥವಾ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ದಕ್ಷಿಣ ಕನ್ನಡ ಜಂಟಿ ಕೃಷಿ ನಿರ್ದೇಶಕರ ಕಚೇರಿ ವಿಳಾಸಕ್ಕೆ ಕಳುಹಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30ಕೊನೆಯ ದಿನ.
ಹೆಚ್ಚಿನ ಮಾಹಿತಿಗೆ ಮಂಗಳೂರು ಜಂಟಿ ಕೃಷಿ ನಿರ್ದೇಶಕರ ಕಛೇರಿ (ದೂರವಾಣಿ ಸಂಖ್ಯೆ-0824-2423604/