ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ

November 20, 2024
8:06 PM

ಕೃಷಿ ಇಲಾಖೆಯಿಂದ ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಪೂರ್ವಭಾವಿಯಾಗಿ ಜಿಲ್ಲಾ ಮಟ್ಟದಲ್ಲಿ ಸಿರಿಧಾನ್ಯ  ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಜಿಲ್ಲೆಯ ಎಲ್ಲಾ ಸಾರ್ವಜನಿಕರು ಭಾಗವಹಿಸಬಹುದು. ಸಸ್ಯಹಾರ ತಿನಿಸುಗಳಿಗೆ ಮಾತ್ರ ಅವಕಾಶವಿದ್ದು, ಪ್ರತಿ ಸ್ಪರ್ಧಿಗೆ ಸಿರಿಧಾನ್ಯದ ಒಂದೇ ತಿನಿಸು (ಅಡುಗೆ)ಸಿಹಿ ಅಥವಾ ಖಾರ ಮಾಡಲು ಅವಕಾಶವಿರುತ್ತದೆ. ಹಾಗೂ ಒಂದು ಮರೆತು ಹೋದ ಖಾಧ್ಯವನ್ನು ಮಾಡಲು ಅವಕಾಶವಿರುತ್ತದೆ. ಅರ್ಜಿಯಲ್ಲಿ ನಮೂದಿಸಿದ ತಿನಿಸಿಗಳನ್ನು ಮನೆಯಲ್ಲಿಯೇ ತಯಾರಿಸಿ ಸ್ಪರ್ಧೆಯಲ್ಲಿ ಪ್ರದರ್ಶಿಸಬೇಕು. ಸ್ಪರ್ಧೆಯನ್ನು ಡಿಸೆಂಬರ್ ಮೊದಲನೇ ವಾರದಲ್ಲಿ ಏರ್ಪಡಿಸಲಾಗುತ್ತದೆ.  ವಿಜೇತರಿಗೆ ನಗದು ಬಹುಮಾನ ನೀಡಲಾಗುತ್ತದೆ.

ಅಭ್ಯರ್ಥಿಗಳು ತಮ್ಮ ಭಾವಚಿತ್ರದೊಂದಿಗೆ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯ, ಬೇಕಾಗುವ ಸಾಮಗ್ರಿಗಳು, ತಯಾರಿಸಲು ಬೇಕಾಗುವ ಸಮಯ ಹಾಗೂ ತಯಾರಿಸುವ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಅರ್ಜಿಯನ್ನು ಕಚೇರಿಯ ಇ-ಮೇಲ್ ವಿಳಾಸಕ್ಕೆ ಕಳುಹಿಸಬೇಕು. ಅಥವಾ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ದಕ್ಷಿಣ ಕನ್ನಡ ಜಂಟಿ ಕೃಷಿ ನಿರ್ದೇಶಕರ ಕಚೇರಿ ವಿಳಾಸಕ್ಕೆ ಕಳುಹಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಮಂಗಳೂರು ಜಂಟಿ ಕೃಷಿ ನಿರ್ದೇಶಕರ ಕಛೇರಿ (ದೂರವಾಣಿ ಸಂಖ್ಯೆ-0824-2423604/8884002801) ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror