Advertisement
MIRROR FOCUS

ಸಿರಿಧಾನ್ಯ ಮೇಳ | ಮೂರು ದಿನದಲ್ಲಿ185.41 ಕೋಟಿ ರೂಪಾಯಿ ವಹಿವಾಟು |

Share

ಬೆಂಗಳೂರಿನಲ್ಲಿ ಈಚೆಗೆ ಮೂರು ದಿನಗಳ ಅಂತರಾಷ್ಟ್ರೀಯ ಮಟ್ಟದ ಸಾವಯವ ಹಾಗೂ ಸಿರಿಧಾನ್ಯ ವ್ಯಾಪಾರ ಮೇಳ ಮುಕ್ತಾಯಗೊಂಡಿತು. 185.41 ಕೋಟಿ ರೂಪಾಯಿ ಆದಾಯ ಗಳಿಸಿ ಅಂದಾಜು 3 ಲಕ್ಷ ಜನರುಮೇಳದಲ್ಲಿ ಭಾಗವಹಿಸಿದರು. ಮೇಳದಲ್ಲಿ 25 ರಾಜ್ಯಗಳು ಮತ್ತು ಐದು ರಾಜ್ಯಗಳ ಕೃಷಿ ಸಚಿವರು ಭಾಗವಹಿಸಿದ್ದರು. ಮೇಳದಲ್ಲಿ 330ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು, 194 ಉತ್ಪಾದಕರು ಮತ್ತು 105 ಮಾರುಕಟ್ಟೆ ಸಂಸ್ಥೆಗಳು ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ, ಕೃಷಿ ಕ್ಷೇತ್ರದ ಬಲವರ್ಧನೆಗೆ ಸರ್ಕಾರ ಶ್ರಮಿಸಲಿದೆ. ರೈತರು ಸುದೃಢವಾದಾಗ ದೇಶವು ಸುಭದ್ರವಾಗುತ್ತದೆ ಮತ್ತು ಹಳ್ಳಿಗಳು ಅಭಿವೃದ್ಧಿ ಹೊಂದುತ್ತವೆ ಎಂದರು. ರಾಜ್ಯ ಸರ್ಕಾರವು ಎಲ್ಲಾ ರೀತಿಯ ಸಿರಿಧಾನ್ಯಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ ಎಂದು ಹೇಳಿದರು. ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳು ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ, ಮತ್ತು ದೈನಂದಿನ ಆಹಾರದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago