ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

July 13, 2025
7:50 AM

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರದಲ್ಲಿ ರಾಜ್ಯಾದ್ಯಂತ ಆಯೋಜಿಸಿದ್ದ  ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸಚಿನ್ ಭಿಡೆ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಗಿಡಗಳ ನಾಟಿ ನೀಡುವಂತೆ ತಿಳಿಸಲಾಯಿತು.

ಬಳಿಕ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಎದುರಾಗಲಿದ್ದು, ನೀರು ಉಳಿಸಿ, ಗಿಡ ನೆಡುವ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಮುಂದಾಗಬೇಕು ಎಂದರು.

ಕುಂದಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ಗಣಪತಿ ಮಾತನಾಡಿ, ಜನರು ಪರಿಸರ ಸ್ನೇಹಿ ವ್ಯಕ್ತಿತ್ವ  ಬೆಳೆಸಿಕೊಳ್ಳುವ ಮೂಲಕ ನಶಿಸಿಹೋಗುತ್ತಿರುವ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡುವ ಅಗತ್ಯವಿದೆ ಎಂದು ತಿಳಿಸಿದರು.

ಈ ವೇಳೆ ಪ್ರಗತಿಪರ ಕೃಷಿಕ ಸಚಿನ್ ಭಿಡೆ, ಮೂಡಬಿದ್ರೆ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್,  ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror