ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಯುಕ್ತಾಶ್ರದಲ್ಲಿ ರಾಜ್ಯಾದ್ಯಂತ ಆಯೋಜಿಸಿದ್ದ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಸಚಿನ್ ಭಿಡೆ ಅವರಿಗೆ ಅರಣ್ಯ ಮಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಸಂಘಟನೆಗಳ ಸದಸ್ಯರು, ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸುವ ಮೂಲಕ ಗಿಡಗಳ ನಾಟಿ ನೀಡುವಂತೆ ತಿಳಿಸಲಾಯಿತು.
ಬಳಿಕ ಶಾಸಕ ಸುನಿಲ್ ಕುಮಾರ್ ಮಾತನಾಡಿ, ಬೇಸಿಗೆ ವೇಳೆ ನೀರಿನ ಸಮಸ್ಯೆ ಎದುರಾಗಲಿದ್ದು, ನೀರು ಉಳಿಸಿ, ಗಿಡ ನೆಡುವ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಮುಂದಾಗಬೇಕು ಎಂದರು.
ಕುಂದಾಪುರ ಉಪಅರಣ್ಯ ಸಂರಕ್ಷಣಾಧಿಕಾರಿ ಕೆ.ಗಣಪತಿ ಮಾತನಾಡಿ, ಜನರು ಪರಿಸರ ಸ್ನೇಹಿ ವ್ಯಕ್ತಿತ್ವ ಬೆಳೆಸಿಕೊಳ್ಳುವ ಮೂಲಕ ನಶಿಸಿಹೋಗುತ್ತಿರುವ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡುವ ಅಗತ್ಯವಿದೆ ಎಂದು ತಿಳಿಸಿದರು.
ಈ ವೇಳೆ ಪ್ರಗತಿಪರ ಕೃಷಿಕ ಸಚಿನ್ ಭಿಡೆ, ಮೂಡಬಿದ್ರೆ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಸೇರಿದಂತೆ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…