ಒಲಂಪಿಕ್​ನಲ್ಲಿ ಪದಕ ಗೆದ್ದರೇ ಕೋಟಿ ಕೋಟಿ ಬಹುಮಾನ | ಕ್ರೀಡಾಪಟುಗಳಿಗೆ ಬಜೆಟ್‌ನಲ್ಲಿ ಬಂಪರ್​ ಆಫರ್​ ನೀಡಿದ ಸಿಎಂ ಸಿದ್ಧರಾಮಯ್ಯ |

February 16, 2024
1:23 PM

2024-25ರ ಕರ್ನಾಟಕ ಬಜೆಟ್​ನಲ್ಲಿ (Karnataka Budget 2024) ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಕ್ರೀಡಾಪಟುಗಳಿಗೆ ಬಂಫರ್ ಆಫರ್ ನೀಡಿದ್ದಾರೆ. ಪ್ಯಾರಿಸ್ ಒಲಂಪಿಕ್ ನಲ್ಲಿ (Paris Olympics) ಪದಕ ಗೆದ್ದವರಿಗೆ ಬಹುಮಾನವನ್ನು ಕರ್ನಾಟಕ ಸರ್ಕಾರ (Karnataka Govt) ಘೋಷಣೆ ಮಾಡಿದೆ. ಒಲಂಪಿಕ್​ನಲ್ಲಿ ಚಿನ್ನದ ಪದಕ(Gold Medal) ಗೆದ್ದವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ (Incentive) ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

Advertisement
Advertisement
Advertisement

ಅಲ್ಲದೇ, ಕಾಮನ್ ವೆಲ್ತ್ ಗೇಮ್ ನಲ್ಲಿ ಪದಕ ಗೆದ್ದವರಿಗೂ ಪ್ರೋತ್ಸಾಹ ಧನ ಘೋಷಣೆ ಮಾಡಿದ್ದು, ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 25 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 15 ಲಕ್ಷ ಬಹುಮಾನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

Advertisement
ಯುವ ಸಬಲೀಕರಣ ಮತ್ತು ಕ್ರೀಡೆ: 

1. ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಾಡಿಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲೂ ಶೇಕಡಾ 2 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.

2. ಬೆಂಗಳೂರಿನ ಉತ್ತರ ತಾಲೂಕಿನಲ್ಲಿ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯವ ಒಳಗೊಂಡ ಕ್ರೀಡಾ ನಗರ ಸಾರ್ವಜನಿಕರ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
3. ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಒಟ್ಟಾರೆ 12 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.
4. ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯ ಮಟ್ಟದ ಒಲಿಂಪಿಕ್ಸ್ ಮತ್ತು 14ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಅಯೋಜಿಸಲಾಗುವುದು.
5. ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದಿಂದ ಒದಗಿಸಲಾವುದು.
6. ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

- ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ
ಅಡಿಕೆ ಬೆಳೆಗಾರರಿಗೆ ಆತಂಕ ಬೇಡ | ಅಡಿಕೆ ಬೆಳೆಗಾರರ ಸಮಸ್ಯೆ ಬಗಹೆರಿಸಲು ಸಿದ್ದ | ಕೇಂದ್ರ ಸಚಿವ ಶಿವರಾಜ್ ಸಿಂಗ್  ಚಾವ್ಙಾಣ್ ಭರವಸೆ |
January 19, 2025
7:03 AM
by: The Rural Mirror ಸುದ್ದಿಜಾಲ
ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ
January 16, 2025
3:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror