ಕೆಎಂಎಫ್‌ನಿಂದ ಫೆಡರಲ್‌ ತತ್ವ ಉಲ್ಲಂಘನೆ | ಅಮೂಲ್ ಆಯ್ತು,ಕೇರಳದಲ್ಲೀಗ ನಂದಿನಿ ಹಾಲಿಗೆ ವಿರೋಧ…! |

April 14, 2023
6:21 PM

ಕರ್ನಾಟಕದಲ್ಲಿ ಅಮೂಲ್‌ ಹಾಲಿಗೆ ವಿರೋಧ ವ್ಯಕ್ತವಾಗುತ್ತಿದಂತೆ ಕೇರಳದಲ್ಲಿ ಈಗ ನಂದಿನಿ ಹಾಲಿಗೆ  ವಿರೋಧ ವ್ಯಕ್ತವಾಗುತ್ತಿದೆ.

Advertisement
Advertisement

ಕೇರಳ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ ಕೇರಳದಲ್ಲಿ ಮಿಲ್ಮಾ ಹಾಲನ್ನು ಮಾರಾಟ ಮಾಡುತ್ತಿದೆ. ಈಗ ಕೆಸಿಎಂಎಂಎಫ್ ಕೇರಳದಲ್ಲಿ ನಂದಿನಿ ಹಾಲು ಮಾರಾಟವಾಗುತ್ತಿರುವುದನ್ನು ಅನೈತಿಕ ಎಂದು ಹೇಳಿದೆ.

Advertisement

ಕೇರಳದ ಕೆಲವು ಭಾಗಗಳಲ್ಲಿ ನಂದಿನಿ ಬ್ರಾಂಡ್‌ ಹಾಲು ಮತ್ತು ಇತರ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡಲು ಕರ್ನಾಟಕ ಹಾಲು ಒಕ್ಕೂಟ (KMF) ಮಳಿಗೆಗಳನ್ನು ತೆರೆದಿದೆ. ಇದು ಭಾರತದ ಡೈರಿ ಕ್ಷೇತ್ರದ ಮೂಲಾಧಾರವಾಗಿರುವ ಸಹಕಾರಿ ಮನೋಭಾವವನ್ನು ಉಲ್ಲಂಘಿಸಿದೆ ಎಂದು ಕೆಸಿಎಂಎಂಎಫ್ ಆರೋಪಿಸಿದೆ.

ಈ ಸಂಬಂಧ ಮಿಲ್ಮಾ ಅಧ್ಯಕ್ಷ ಕೆಎಸ್‌ ಮಣಿ ಪ್ರತಿಕ್ರಿಯಿಸಿ, ಇತ್ತೀಚೆಗೆ ಕೆಲವು ರಾಜ್ಯಗಳ ಹಾಲು ಮಾರಾಟ ಒಕ್ಕೂಟಗಳು ತಮ್ಮ ಪ್ರಮುಖ ಉತ್ಪನ್ನಗಳನ್ನು ತಮ್ಮ ರಾಜ್ಯದ ಹೊರಗಡೆ ಮಾರಾಟ ಮಾಡುತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದು ಫೆಡರಲ್ ತತ್ವಗಳು ಮತ್ತು ಸಹಕಾರ ಮನೋಭಾವವನ್ನು ಸಂಪೂರ್ಣವಾಗಿ ಉಲ್ಲಂಘನೆ ಮಾಡಿದಂತೆ ಆಗುತ್ತದೆ ಎಂದು ಹೇಳಿದ್ದಾರೆ.

Advertisement

ಕರ್ನಾಟಕ ಹಾಲು ಮಾರಾಟ ಒಕ್ಕೂಟವು ಇತ್ತೀಚೆಗೆ ತನ್ನ ನಂದಿನಿ ಬ್ರಾಂಡ್ ಹಾಲು ಮತ್ತು ಇತರ ಉತ್ಪನ್ನಗಳನ್ನು ಮಾರಾಟ ಮಾಡಲು ಕೇರಳದ ಕೆಲವು ಭಾಗಗಳಲ್ಲಿ ತನ್ನ ಮಳಿಗೆಗಳನ್ನು ತೆರೆದಿದೆ. ಇದನ್ನು ಹೇಗೆ ಸಮರ್ಥಿಸಬಹುದು? ಇದನ್ನು ಯಾರೇ ಮಾಡಿದರೂ, ಇದು ಅತ್ಯಂತ ಅನೈತಿಕ ಕೆಲಸ. ಇದು ಭಾರತದ ಡೈರಿ ಚಳುವಳಿಯ ಉದ್ದೇಶವನ್ನು ಸೋಲಿಸುತ್ತದೆ. ಮತ್ತು ರೈತರ ಹಿತಾಸಕ್ತಿಗೆ ಧಕ್ಕೆಯುಂಟುಮಾಡುತ್ತದೆ ಎಂದಿದ್ದಾರೆ.

ಒಂದು ರಾಜ್ಯದ ಸಂಘ ಇನ್ನೊಂದು ರಾಜ್ಯದಲ್ಲಿ ತನ್ನ ಉತ್ಪನ್ನವನ್ನು ಮಾರಾಟ ಮಾಡುವುದು ರಾಜ್ಯ ರಾಜ್ಯಗಳ ನಡುವಿನ ಅನಾರೋಗ್ಯಕರ ಸ್ಪರ್ಧೆಗೆ ಕಾರಣವಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !
May 7, 2024
11:33 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror