ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ವಯೋಮಿತಿ ನಿಗದಿ – 4 ವರ್ಷ ಕಡ್ಡಾಯ

May 5, 2023
1:17 PM

ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ನಾಲ್ಕು ವರ್ಷ ವಯೋಮಿತಿ ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಎಲ್‍ಕೆಜಿಗೆ ಸೇರಿಸಲು ಮಗುವಿಗೆ 4 ವರ್ಷ ತುಂಬಿರಬೇಕು. 2025 ಹಾಗೂ 26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಯ ದಾಖಲಾತಿಗೆ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯ ಎಂಬ ನಿಯಮ ಜಾರಿ ಮಾಡಲಾದ ಹಿನ್ನಲೆಯಲ್ಲಿ ಎಲ್‍ಕೆಜಿಗೆ ಈ ವಯಸ್ಸನ್ನು ನಿಗದಿ ಪಡಿಸಲಾಗಿದೆ. ಮುಂದಿನ ಸಾಲಿನಿಂದ ಒಂದನೇ ತರಗತಿಗೆ ದಾಖಲಾಗಲು 6 ವರ್ಷ ಕಡ್ಡಾಯ ಎಂದು ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ.

ಒಂದನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ಕಡ್ಡಾಯ ನಿಯಮದ ಹಿನ್ನಲೆಯ ಪೂರ್ವ ತಯಾರಿಯಾಗಿ ಈ ವರ್ಷದಿಂದ ಎಲ್‍ಕೆಜಿ ದಾಖಲಾತಿಗೆ 4 ವರ್ಷ ನಿಗದಿ ಪಡಿಸಿ ಆದೇಶ ಹೊರಡಿಸಲಾಗಿದೆ. ಕಡ್ಡಾಯ ಶಿಕ್ಷಣ ನೀತಿ

2009 ಹಾಗೂ 2012ರ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ
October 15, 2026
10:10 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror