ಎಲ್‍ಕೆಜಿ ಮಕ್ಕಳ ಶಾಲಾ ದಾಖಲಾತಿಗೆ ನಾಲ್ಕು ವರ್ಷ ವಯೋಮಿತಿ ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಈ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಎಲ್‍ಕೆಜಿಗೆ ಸೇರಿಸಲು ಮಗುವಿಗೆ 4 ವರ್ಷ ತುಂಬಿರಬೇಕು. 2025 ಹಾಗೂ 26ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಯ ದಾಖಲಾತಿಗೆ 6 ವರ್ಷ ಪೂರ್ಣಗೊಂಡಿರುವುದು ಕಡ್ಡಾಯ ಎಂಬ ನಿಯಮ ಜಾರಿ ಮಾಡಲಾದ ಹಿನ್ನಲೆಯಲ್ಲಿ ಎಲ್‍ಕೆಜಿಗೆ ಈ ವಯಸ್ಸನ್ನು ನಿಗದಿ ಪಡಿಸಲಾಗಿದೆ. ಮುಂದಿನ ಸಾಲಿನಿಂದ ಒಂದನೇ ತರಗತಿಗೆ ದಾಖಲಾಗಲು 6 ವರ್ಷ ಕಡ್ಡಾಯ ಎಂದು ಇಲಾಖೆ ಆದೇಶದಲ್ಲಿ ಉಲ್ಲೇಖಿಸಿದೆ.
ಒಂದನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ಕಡ್ಡಾಯ ನಿಯಮದ ಹಿನ್ನಲೆಯ ಪೂರ್ವ ತಯಾರಿಯಾಗಿ ಈ ವರ್ಷದಿಂದ ಎಲ್‍ಕೆಜಿ ದಾಖಲಾತಿಗೆ 4 ವರ್ಷ ನಿಗದಿ ಪಡಿಸಿ ಆದೇಶ ಹೊರಡಿಸಲಾಗಿದೆ. ಕಡ್ಡಾಯ ಶಿಕ್ಷಣ ನೀತಿ
2009 ಹಾಗೂ 2012ರ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿರುವ ಶಿಕ್ಷಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…