ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ. ಜಿಲ್ಲೆಯ ಹುಲಕಲ್ ಗ್ರಾಮದ ಬಳಿ ಮಣಿಕಂಠ ಹತ್ತಿ ಮಿಲ್ ನಲ್ಲಿ ಹತ್ತಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಹತ್ತಿ ಖರೀದಿ ಕೇಂದ್ರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಅಧಿಕೃತ ಕೇಂದ್ರಗಳಲ್ಲಿ ಮಾತ್ರ ಹತ್ತಿ ಮಾರಾಟ ಮಾಡಬೇಕು. ಅಕ್ರಮ ಖರೀದಿದಾರರಿಗೆ ಹತ್ತಿ ಮಾರಾಟ ಮಾಡಿ ವಂಚನೆಗೆ ಒಳಗಾಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಕ್ವಿಂಟಾಲ್‌ಗೆ 7521 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಒಂದು ಎಕರೆಗೆ 12 ಕ್ವಿಂಟಾಲ್ ಹತ್ತಿ ಮಾತ್ರ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel