ಹತ್ತಿ ಬೆಳೆಗೆ ಬೆಂಬಲ ಬೆಲೆ | 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ  | ಸಚಿವ ಶರಣಬಸಪ್ಪ ದರ್ಶನಾಪುರ

November 14, 2024
9:00 AM

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ 14 ಕೇಂದ್ರಗಳ ಸ್ಥಾಪನೆಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.  ಜಿಲ್ಲೆಯ ಹುಲಕಲ್ ಗ್ರಾಮದ ಬಳಿ ಮಣಿಕಂಠ ಹತ್ತಿ ಮಿಲ್ ನಲ್ಲಿ ಹತ್ತಿ ಖರೀದಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಹತ್ತಿ ಖರೀದಿ ಕೇಂದ್ರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಅಧಿಕೃತ ಕೇಂದ್ರಗಳಲ್ಲಿ ಮಾತ್ರ ಹತ್ತಿ ಮಾರಾಟ ಮಾಡಬೇಕು. ಅಕ್ರಮ ಖರೀದಿದಾರರಿಗೆ ಹತ್ತಿ ಮಾರಾಟ ಮಾಡಿ ವಂಚನೆಗೆ ಒಳಗಾಗಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಕ್ವಿಂಟಾಲ್‌ಗೆ 7521  ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಒಂದು ಎಕರೆಗೆ 12 ಕ್ವಿಂಟಾಲ್ ಹತ್ತಿ ಮಾತ್ರ ಮಾರಾಟ ಮಾಡಬಹುದಾಗಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ
ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ
October 23, 2026
10:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror