14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

May 29, 2025
7:12 AM
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ ಹಾಗೂ ದ್ವಿದಳ ಧಾನ್ಯಗಳು, ತೈಲ ಬೀಜಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಇದಕ್ಕೆ 2 ಲಕ್ಷ ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಕಾಲ ಕಾಲಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಲಾಗಿದೆ.

2025-26ನೇ ಸಾಲಿನ 14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದ್ದು, ಉತ್ಪಾದನಾ ವೆಚ್ಚಕ್ಕಿಂತ ಶೇಕಡ 50ರಷ್ಟು ಹೆಚ್ಚಳ ಮಾಡಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ…..ಮುಂದೆ ಓದಿ….

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ, ದೇಶದ ರೈತರ ಕಲ್ಯಾಣಕ್ಕಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ ಹಾಗೂ ದ್ವಿದಳ ಧಾನ್ಯಗಳು, ತೈಲ ಬೀಜಗಳ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿದೆ. ಇದಕ್ಕೆ 2 ಲಕ್ಷ ಕೋಟಿ ರೂಪಾಯಿ ನಿಗದಿಪಡಿಸಲಾಗಿದೆ. ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಕಾಲ ಕಾಲಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡುತ್ತಿದೆ ಎಂದು ತಿಳಿಸಿದರು. ಬಡ್ಡಿದರ ಸಹಾಯಧನ ಯೋಜನೆ ಅಡಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರಿಗೆ ನೆರವು ನೀಡಲಾಗುವುದು. ಶೇಕಡ 4ರ ಬಡ್ಡಿದರದಲ್ಲಿ 2 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಯೋಜನೆ ಮೂಲಕ ಅಗತ್ಯ ಕೃಷಿ ಕಾರ್ಯಗಳಿಗೆ ದುಡಿಯುವ ಬಂಡವಾಳವನ್ನು ಖಚಿತಪಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ಯೋಜನೆಯಡಿ 7 ಕೋಟಿ 71 ಲಕ್ಷ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಬಡ್ವೇಲ್-ನೆಲ್ಲೂರು ನಡುವೆ 4 ಪಥಗಳ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಹೆದ್ದಾರಿ ನಿರ್ಮಾಣದಿಂದ ಪ್ರಮುಖ ಆರ್ಥಿಕ ಚಟುವಟಿಕೆ ಪ್ರದೇಶಗಳಾಗಿರುವ ಕರ್ನಾಟಕದ ಹುಬ್ಬಳ್ಳಿ, ಹೊಸಪೇಟೆ ಹಾಗೂ ಬಳ್ಳಾರಿಗಳಿಗೂ ಉತ್ತಮ ಸಂಪರ್ಕ ದೊರೆಯಲಿದೆ. ಇದರೊಂದಿಗೆ ರತ್ಲಾಮ್-ನಾಗ್ಡಾ ನಡುವಿನ ಮೂರು ಮತ್ತು ನಾಲ್ಕನೇ ರೈಲು ಮಾರ್ಗ ಹಾಗೂ ವಾರ್ಧಾ-ಬಲಾರ್ಶ್ ನಡುವಿನ ನಾಲ್ಕನೇ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror