ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ – ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯ

January 17, 2026
7:15 AM
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಜಾಥಾ ನಡೆಸಲಿದೆ. ಮಾರ್ಚ್ 19ರಂದು ದೆಹಲಿಯಲ್ಲಿ ಬೃಹತ್ ರೈತ ಸಮಾವೇಶ.

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿ ಕಾನೂನು ಜಾರಿಗೊಳಿಸಬೇಕು ಎಂಬ ಆಗ್ರಹವನ್ನು ಮುಂದಿಟ್ಟು, ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಜಾಥಾ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಮೈಸೂರಿನಲ್ಲಿ  ಮಾತನಾಡಿದ ಅವರು, ಫೆಬ್ರವರಿ 7ರಂದು ಕನ್ಯಾಕುಮಾರಿಯಿಂದ ಜಾಥಾ ಆರಂಭವಾಗಲಿದ್ದು, ಅದು ಕೇರಳ, ತಮಿಳುನಾಡು, ಪುದುಚೇರಿ ಮೂಲಕ ಕರ್ನಾಟಕಕ್ಕೆ ಆಗಮಿಸಲಿದೆ ಎಂದು ಹೇಳಿದರು. ಜಾಥಾ ಸಾಗುವ ಮಾರ್ಗದಾದ್ಯಂತ ರೈತರಿಂದ ಸಹಿ ಸಂಗ್ರಹಿಸಿ, ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ಒತ್ತಾಯಿಸಲಾಗುವುದು ಎಂದರು.

ಮಾರ್ಚ್ 19ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ರೈತರ ಬೃಹತ್ ಸಮಾವೇಶ ಆಯೋಜಿಸಲು ನಿರ್ಧರಿಸಲಾಗಿದ್ದು, ಸಮಾವೇಶದ ನಂತರ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ಎಂಎಸ್‌ಪಿ ದರಕ್ಕಿಂತ ಕಡಿಮೆ ಬೆಲೆಯಲ್ಲಿ ಕೃಷಿ ಉತ್ಪನ್ನಗಳು ಮಾರಾಟವಾಗುತ್ತಿರುವುದರಿಂದ, ರೈತರಿಗೆ ವರ್ಷಕ್ಕೆ ಸರಿಸುಮಾರು 15 ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾಗುತ್ತಿದೆ. ಈ ಗಂಭೀರ ವಿಷಯಗಳನ್ನು ಸರ್ಕಾರದ ಗಮನಕ್ಕೆ ತರಲು ಈ ಜಾಥಾ ಮತ್ತು ಸಮಾವೇಶ ಪ್ರಮುಖವಾಗಲಿದೆ ಎಂದು ಕುರುಬೂರು ಶಾಂತಕುಮಾರ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!
March 4, 2026
12:01 PM
by: ಮಿರರ್‌ ಡೆಸ್ಕ್
ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ
March 4, 2026
10:56 AM
by: ಮಿರರ್‌ ಡೆಸ್ಕ್
ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ
March 4, 2026
7:27 AM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror